ಬಂಟ್ವಾಳ: ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ನಿ. ಮಂಗಳೂರು ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸಹಕಾರ ಭಾರತಿಯ ಅಭ್ಯರ್ಥಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಎದುರಾಳಿ ಅಭ್ಯರ್ಥಿಯ ವಿರುದ್ದ ಗೆಲುವು ಸಾಧಿಸಿ ಅವರು ನಿರ್ದೇಶಕ ಮಂಡಳಿಗೆ ಆಯ್ಕೆಯಾದರು. ಶಂಭೂರು ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಸ್ವಯಂ ಸೇವಕನಾಗಿ, ಕನ್ಯಾಡಿ ಶ್ರೀರಾಮ ಕ್ಷೇತ್ರದ ಬಂಟ್ವಾಳ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಮಾಣಿಲ ಶ್ರೀಧಾಮ ಬಂಟ್ವಾಳ ಸೇವಾ ಸಮಿತಿಯಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಬಿಜೆಪಿ ಯುವ ಮೋರ್ಚ ಹಾಗೂ ಸಹಕಾರಿ ಪ್ರಕೋಷ್ಟದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ.
