Friday, January 30, 2026

ಬೆಂಗಳೂರಿನ ‘ಮೂವರಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು’ ದೃಢ!

ಬೆಂಗಳೂರು:ತೀವ್ರ ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಹಾಗೂ ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಒಟ್ಟಾರೆಯಾಗಿ ತೀವ್ರ ಆತಂಕ ಸೃಷ್ಠಿಸಿದ್ದಂತ ಬ್ರಿಟನ್ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಮೂವರಿಗೆ ಕೊರೋನಾ ರೂಪಾಂತರಿ ವೈರಸ್ ದೃಢಪಟ್ಟಿದ್ದು, ರಾಜ್ಯಕ್ಕೆ ಮೂವರೇ ಕಂಟವಾಗುವ ಸಾಧ್ಯತೆ ಇದೆ. ಸೋ ರಾಜ್ಯದ ಜನರು ಇನ್ಮುಂದೆ ಎಚ್ಚರಿಕೆ ವಹಿಸಬೇಕಿದೆ. ಕೊರೋನಾ ಸೋಂಕು ನಿಯಂತ್ರಣದ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...