Friday, June 27, 2025

ಕೋರೊಣಾ ಬಗ್ಗೆ ಹೆಚ್ಚು ಜಾಗೃತಗೊಳ್ಳುವಂತೆ ಸಾರ್ವಜನಿಕರಲ್ಲಿ ವಿನಂತಿ: ಬಿ ರಮಾನಾಥ ರೈ

ಬಂಟ್ವಾಳ: ಬಂಟ್ವಾಳ ತಾಲೂಕು ಬಡಗಕಜೆಕಾರ್ ಗ್ರಾಮ ಪಂಚಾಯಾತ್ ವ್ಯಾಪ್ತಿಯ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಾತ್ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋರೊನಾ ಸಾಂಕ್ರಮಿಕ ರೋಗ ಅತೀ ವೇಗವಾಗಿ ಹರಡುತ್ತಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಜನತೆ ಜಾಗೃತರಾಗಿ ಸರಕಾರದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಿದರು. ಹಾಗೂ ಗ್ರಾಮದಲ್ಲಿ ಸೋಂಕಿತರ ಮಾಹಿತಿಯನ್ನು ಪಡೆದು ಸೋಂಕಿತರ ಕುಟುಂಬಕ್ಕೆ ದಿನಬಳಕೆಯ ಸಾಮಗ್ರಿಗಳನ್ನು ಪಂಚಾಯಾತ್‍ನಿಂದಲೆ ವ್ಯವಸ್ಥೆ ಕಲ್ಪಿಸುವಂತೆ ವಿನಂತಿಸಿದರು. ಬಡಗಕಜೆಕಾರ್ ಗ್ರಾಮ ಪಂಚಾಯಾತ್ ಸಂಪೂರ್ಣ ಕೋರೊನ ರಹಿತ ಗ್ರಾಮ ಪಂಚಾಯಾತ್ ಆಗಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಜಿಲ್ಲಾ ಪಂಚಾಯಾತ್ ಸದಸ್ಯರಾದ ಪದ್ಮಶೇಖರ್ ಜೈನ್ ಪಂಚಾಯಾತ್ ಅಧ್ಯಕ್ಷರಾದ ಆಸ್ಮ ಅಜೀಜ್ ಉಪಾಧ್ಯಕ್ಷರಾದ ಡೀಕಯ್ಯ ಬಂಗೇರ ಸದಸ್ಯರಾದ ಜಾನ್ ಡಿಸೋಜ, ಹರಿಣಾಕ್ಷಿ ಪೂಜಾರಿ ಮುಖಂಡರಾದ ಮೋಹನ್ ಗೌಡ ಕಲ್ಮಂಜ, ಜಯ ಬಂಗೇರ, ಸುಧಾಕರ್ ಶೆಣೈ, ವಾಸು ಪೂಜಾರಿ, ವಿಶ್ವನಾಥ್ ಪೂಜಾರಿ, ಬಾಲಕೃಷ್ಣ ಪ್ರಭು, ಯಾಕುಬ್ ಉದ್ದದಗುಡ್ಡೆ ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...