Saturday, January 31, 2026

ಕೊರೊನಾ ಮಹಾಮಾರಿಯ ಕುರಿತು ಊಹಾಪೋಹಗಳಿಗೆ ಕಿವಿಕೊಡಬೇಡಿ ಸರಕಾರದ ನಿಯಮಗಳು ಪಾಲಿಸಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಕೊರೊನಾ ಮಹಾಮಾರಿಯ ಕುರಿತು ಏನೇ ಊಹಾಪೋಹಗಳು ಹಬ್ಬಿದರೂ, ಸರಕಾರದ ನಿಯಮಗಳನ್ನು ನಾವು ಸಮರ್ಪಕವಾಗಿ ಪಾಲಿಸಿದೇ ಆದಲ್ಲಿ ಕೊರೊನಾದಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ನೆಟ್ಲಮುಡ್ನೂರು ಗ್ರಾ.ಪಂ.ನಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಭೆ ನಡೆಸಿ ಮಾತನಾಡಿದರು.

ಬೆಡ್ ಸೌಕರ್ಯ, ಆಕ್ಸಿಜನ್ ಲಭ್ಯತೆ, ಐಸಿಯು ಎಲ್ಲಾ ಸೌಲಭ್ಯಗಳನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಸುಸಜ್ಜಿತವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ‌. ಹಾಗೆಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ ಎಂದರು.

ಸಂಪರ್ಕಿತರ ಪರೀಕ್ಷಾ ಕಾರ್ಯದ ಕುರಿತು ಮಾಹಿತಿ ಪಡೆದರು. ಗ್ರಾ.ಪಂ.ಸೀಲ್ ಡೌನ್ ಆಗಿರುವುದರಿಂದ ಲಸಿಕಾ ಅಭಿಯಾನ ಕೊಂಚ ವಿಳಂಬವಾಗಿತ್ತು ಎಂದು ಮಾಹಿತಿ ನೀಡಲಾಯಿತು. ಸದಸ್ಯರನ್ನೂ ಪ್ರಂಟ್ ಲೈನ್ ವಾರಿಯರ್ಸ್‌ ಆಗಿ ಗುರುತಿಸಲಾಗಿದ್ದು, ಲಸಿಕೆ ಪಡೆಯುವ ಕಾರ್ಯವಾಗಬೇಕು ಎಂದು ಶಾಸಕರು ಸೂಚಿಸಿದರು.

ತಹಶೀಲ್ದಾರ್ ರಶ್ಮಿ ಎಸ್. ಆರ್.ಮಾತನಾಡಿ, ಆದ್ಯತೆ ಗುಂಪುಗಳನ್ನಾಗಿ ೧೮ ರಿಂದ ೪೪ ವರ್ಷದವರನ್ನು‌ ಮಾತ್ರ ಗುರುತಿಸುತ್ತಿದ್ದೇವೆ. ಉಳಿದವರಿಗೆ ಸಾಮಾನ್ಯ ಪ್ರಕ್ರಿಯೆಯಲ್ಲಿ ಲಸಿಕೆ ಲಭ್ಯವಾಗುತ್ತಿದೆ. ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಯುತ್ತಿದ್ದು, ಯಾರಿಗಾದರೂ ಲಕ್ಷಣ ಇದ್ದರೆ ಮನೆಗೇ ವೈದ್ಯರು ಬಂದು ಪರೀಕ್ಷೆ ನಡೆಸುವ ಕಾರ್ಯ ಮಾಡುತ್ತಾರೆ ಎಂದರು.

ತಾ.ಪಂ.ಇಒ ರಾಜಣ್ಣ ಮಾತನಾಡಿ, ಸೋಂಕಿತರ ಮನೆಯವರು ಓಡಾಡದಂತೆ ಎಚ್ಚರಿಕೆ ವಹಿಸಲು ವಾರ್ಡ್ ಸದಸ್ಯರು ಜವಾಬ್ದಾರಿ ತೆಗೆದುಕೊಳ್ಳಬೇಕು.

ಈ ಸಂದರ್ಭದಲ್ಲಿ ಶಾಸಕರು ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಿದರು.

ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಗ್ರಾ.ಪಂ.ಅಧ್ಯಕ್ಷ ಸತೀಶ್ ಕೊಪ್ಪರಿಗೆ, ಉಪಾಧ್ಯಕ್ಷೆ ಶಕೀಲಾ ಕೃಷ್ಣಪ್ಪ ಪೂಜಾರಿ, ಅಭಿವೃದ್ಧಿ ಅಧಿಕಾರಿ ಎ.ಬಿ.ಅಜಿತ್ ಕುಮಾರ್, ಗ್ರಾಮಕರಣಿಕ ಮಂಜುನಾಥ್ ಕೆ.ಎಚ್., ಗ್ರಾ.ಪಂ.ಸದಸ್ಯರು, ಟಾಸ್ಕ್ ಫೋರ್ಸ್ ಸದಸ್ಯರು ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...