ಬಂಟ್ವಾಳ: ಇಂದು ರಾಜ್ಯದಲ್ಲಿ 97 ಹೊಸ ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈಗ ಸೋಂಕಿತರ ಸಂಖ್ಯೆ 2 ಸಾವಿರದ ಗಡಿ ದಾಟಿದೆ.
ಚಿಕ್ಕಬಳ್ಳಾಪುರ 26, ಉಡುಪಿ 18, ಹಾಸನ ಹಾಗೂ ಮಂಡ್ಯದಲ್ಲಿ 14, ಯಾದಗಿರಿ ಮತ್ತು ಕಲಬುರಗಿಯಲ್ಲಿ ತಲಾ ಆರು ಪ್ರಕರಣ,
ಯಾದಗಿರಿ 5, ದಾವಣಗೆರೆಯಲ್ಲಿ 4, ಉತ್ತರ ಕನ್ನಡ ಮತ್ತು ತುಮಕೂರು ತಲಾ 2, ದ.ಕ., ವಿಜಯಪುರ, ಕೊಡಗಿನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಒಟ್ಟು 634 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 42 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.

