Wednesday, July 2, 2025

ದ.ಕ. ಜಿಲ್ಲೆಯಲ್ಲಿ ಇಂದು 16 ಮಂದಿಗೆ ಕೊರೊನಾ ಪಾಸಿಟಿವ್ ಸೊಂಕು ದೃಢ

ದುಬೈ ಹೊರತುಪಡಿಸಿ ಸುರತ್ಕಲ್ ಮೂಲದ ಓರ್ವ ಮಹಿಳೆಗೆ ಪಾಸಿಟಿವ್ ಪ್ರಕರಣದಲ್ಲಿ 69 ವರ್ಷದ ಮಹಿಳೆಗೆ ಸೋಂಕು ದೃಢ ಮಂಗಳೂರು ಹೊರವಲಯದ ಸುರತ್ಕಲ್ ಪ್ರದೇಶದ ಮಹಿಳೆ, ಜಿಲ್ಲೆಯಲ್ಲಿ ಒಟ್ಟು 16 ಪ್ರಕರಣಗಳಲ್ಲಿ 15 ದುಬೈ ಮತ್ತು ಒಂದು ಸುರತ್ಕಲ್.

ಮೇ 18 ರಂದು ದುಬೈನಿಂದ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ,171 ಮಂದಿ ಪ್ರಯಾಣಿಕರು ಮಂಗಳೂರಿಗೆ ಬರಲಿದ್ದಾರೆ,ದ.ಕ‌ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾಹಿತಿ

ಮಂಗಳೂರು: ಮಂಗಳೂರು ಇಂದು 16 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಕಳೆದ ಎರಡು ದಿನಗಳ ಹಿಂದೆ ವಿದೇಶದಿಂದ ಭಾರತಕ್ಕೆ ಬಂದ 15 ಪ್ರಯಾಣಿಕರಲ್ಲಿ ಕೊರೊನಾ ಸೊಂಕು ದೃಡಪಟ್ಟಿದೆ. ವಿದೇಶದಲ್ಲಿ ಸಿಲುಕಿದ್ದ 178 ಮಂದಿಯನ್ನು ಎರಡು ದಿನಗಳ ಹಿಂದೆಯಷ್ಟೇ ತಾಯ್ನಾಡಿಗೆ ವಿಶೇಷ ವಿಮಾನ ಮೂಲಕ ಕರೆಸಿಕೊಂಡಿತು. 178 ಮಂದಿ ಪ್ರಯಾಣಿಕರ ಪೈಕಿ 123 ಪ್ರಯಾಣಿಕರು ಮಂಗಳೂರಿಗರು. ವಿದೇಶದಿಂದ ಬಂದ ಎಲ್ಲರನ್ನು ಕೂಡಾ ಕ್ವಾರಂಟೈನ್ ಮಾಡಲಾಗಿತ್ತು.
8 ಹೋಟೆಲ್, ಒಂದು ಖಾಸಗಿ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಆದರೆ ಕ್ವಾರಂಟೈನ್ ಮಾಡಲಾಗಿರುವ ವ್ಯಕ್ತಿಗಳ ಪೈಕಿ 15 ಜನರಲ್ಲಿ ಇಂದು ಕೊರೊನಾ ಸೊಂಕು ದೃಡಪಟ್ಟಿದೆ.
ವಿದೇಶದಿಂದ ಬಂದಿರುವ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿ ಬಳಿಕ ಅವರ ಗಂಟಲು ದ್ರವರೂಪದ ಮಾದರಿ ಸಂಗ್ರಹಿಸಿ ಬಳಿಕ ಪರೀಕ್ಷೆ ಗಾಗಿ ಲ್ಯಾಬೋರೇಟರಿ ಗೆ ಕಳುಹಿಸಿಕೊಡಲಾಗಿತ್ತು.
ಈವರೆಗೆ ಫಸ್ಟ್ ನ್ಯೂ ರೋ ಆಸ್ಪತ್ರೆ ಯಿಂದ ಕಂಗೆಟ್ಟಿದ್ದ ಜಿಲ್ಲೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇದಾಗಿದೆ.
ದಿನಕಳೆದಂತೆ ಜಿಲ್ಲೆಯ ಲ್ಲಿ ಕೊರೊನಾ ಪಾಸಿಟಿವ್ ಸೊಂಕು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ವಿನಃ ಕಡಿಮೆಯಾಗುತ್ತಿಲ್ಲ ಎಂಬ ಆತಂಕದಲ್ಲಿ ಜನರಿದ್ದಾರೆ. ಮೇ.12 ರಂದು ರಂದು ದುಬೈ ನಿಂದ ಏರ್ ಲಿಪ್ಟ್ ಅಗಿದ್ದ ಮಂಗಳೂರಿಗರು.
15 ಮಂದಿ ದುಬೈ ರಿಟರ್ನ್ಸ್ ಮತ್ತು ಒಂದು ಬೇರೆ ಸಂಪರ್ಕ ದಿಂದ ಸೊಂಕು ಸದ್ಯ ದ.ಕ.ಜಿಲ್ಲೆಯ ಲ್ಲಿ ಸಕ್ರಿಯ ಪ್ರಕರಣಗಳು 29 ಕ್ಕೆ ಏರಿದೆ.

ದ.ಕ ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ ಪಾಸಿಟಿವ್ ಕೇಸ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ದ.ಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರು 5 ಮಂದಿ, ಫಸ್ಟ್ ನ್ಯೂರೋ ಸಂಪರ್ಕದಿಂದ ಸೋಂಕು ತಗುಲಿ ಸಕ್ರಿಯ ಪ್ರಕರಣ 13.

More from the blog

ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ..

ವಿಟ್ಲ: ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಪೇಟೆಯಲ್ಲಿ ಕೆಲವು ದಿನಗಳಿಂದ ಸಮರ್ಪಕ ಸಂಚಾರ ವ್ಯವಸ್ಥೆ ಕಲ್ಪಿಸಿದ್ದು ಮಂಗಳವಾರ ಬೆಳಗ್ಗೆ ಏಕಾಏಕಿ ಅಟೋರಿಕ್ಷಾಗಳು ರಸ್ತೆಯಲ್ಲಿ...

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...