Saturday, January 31, 2026

ಮಂಗಳೂರು: ಮತ್ತೊಂದು ಕೊರೊನಾ ಪಾಸಿಟಿವ್ ಧೃಢ

ಮಂಗಳೂರು: ನಗರ ವ್ಯಾಪ್ತಿಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೋಳೂರಿನ 58 ವಯಸ್ಸಿನ ಮಹಿಳೆಗೆ ಕೊರೊನ ಪಾಸಿಟಿವ್.

ಬೋಳೂರು ನಿವಾಸಿ, 58 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದರು. ಈ ವೇಳೆ ರೋಗಿ ಸಂಖ್ಯೆ 501 ರ ಸಂಪರ್ಕಕ್ಕೆ ಬಂದಿದ್ದರು ಎನ್ನಲಾಗಿದೆ.  ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯಲ್ಲಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರ ಗಂಟಲ ಸ್ರಾವವನ್ನು ಪರೀಕ್ಷೆಗಾಗಿ ಕಳುಹಿಸಿತ್ತು. ಕೊರೊನಾ ದೃಢವಾದ ಹಿನ್ನಲೆಯಲ್ಲಿ ಇದೀಗ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕಕ್ಕೆ ಬಂದಿದ್ದ ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಬೋಳೂರು ಪರಿಸರದಲ್ಲಿ ಕೊರೊನಾ ಸೋಂಕು ದೃಡವಾದ ಹಿನ್ನಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಬುಧವಾರ ಸಂಜೆಯಿಂದ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ಇಂದು ಹೊಸದಾಗಿ 22 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು 557ಕ್ಕೆ ಏರಿಕೆಯಾಗಿದೆ.

 

 

 

 

 

More from the blog

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...