Friday, June 27, 2025

ರಾಜ್ಯದ ಸಚಿವರಿಗೆ ಕೊರೊನಾ ಟೆಸ್ಟ್: ಮೂರು ಸಚಿವರಿಗೆ ಕ್ವಾರಂಟೈನ್

ಬೆಂಗಳೂರು : ರಾಜ್ಯದ 5 ಸಚಿವರಿಗೆ ಕೊರೊನಾ ಸೋಂಕಿತ ವ್ಯಕ್ತಿ ಸಂಪರ್ಕಕ್ಕೆ ಬಂದಿರುವ ಹಿನ್ನೆಲೆ ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಸಿ.ಟಿ. ರವಿ, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದು, ಇದೀಗ ಮೂವರ ವರದಿ ನೆಗೆಟಿವ್ ಬಂದಿದೆ. ಆದರೂ ಮೂವರು ಸಚಿವರು ಹೋಮ್ ಕ್ಯಾರಂಟೈನ್ ನಲ್ಲಿರಲು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ದೃಢಪಟ್ಟಿರುವ ಖಾಸಗಿ ವಾಹಿನ ಕ್ಯಾಮೆರಾಮನ್ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಐವರು ಸಚಿವರಿಗೆ ಕೊರೊನಾ ಭೀತಿ ಆವರಿಸಿದ್ದು, ಹೀಗಾಗಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.  ಈ ಕುರಿತು ಟ್ವೀಟ್ ಮಾಡಿರುವ ಅಶ್ವತ್ಥ್ ನಾರಾಯಣ್, ಕೋವಿಡ್-19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದೆಂಬ ಮಾಹಿತಿ ಪಡೆದಿದ್ದು, ನಾನು ಹೋಂ ಕ್ವಾರಂಟೈನ್ ಆಗಿರುತ್ತೇನೆ. ನನ್ನ ಟೆಸ್ಟ್ ನೆಗೆಟಿವ್ ಬಂದಿದ್ದು, ಜಾಗರೂಕತೆಗಾಗಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ಎಂದು ಹೇಳಿದ್ದಾರೆ.

ಇನ್ನು ಈ ಕುರಿತು ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ಡಾ.ಕೆ.ಸುಧಾಕರ್ ಅವರು ಕೂಡಾ ಮಾಹಿತಿ ನೀಡಿದ್ದು, ಹೋಂ ಕ್ವಾರಂಟೈನ್ ನಲ್ಲಿರುವುದಾಗಿ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...