Friday, July 11, 2025

ಕೊರೋನಾ ವೈರಸ್ ಭೀತಿ ಬಗ್ಗೆ ವದಂತಿಗಳಿಗೆ ಕಿವಿಗೊಡದಿರಿ ಎಂದು ಪ್ರಧಾನಿ ಮೋದಿ ಮನವಿ

ದೆಹಲಿ: ಮಾರಕ ಕೊರೋನಾ ವೈರಸ್ ಗೆ ಇಡೀ ಜಗತ್ತೇ ಆತಂಕಕ್ಕೀಡಾಗಿದೆ. ಇಂತಹ ವದಂತಿಗಳಿಗೆ ಕಿವಿಗೊಡದಂತೆ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿಕೊಂಡಿದ್ದಾರೆ. ಜನೌಷಧಿ ಸಂವಾದದಲ್ಲಿ ಮಾತನಾಡಿದ ಅವರು, ಅದು ತಿನ್ನಬೇಡಿ, ಇದು ತಿನ್ನಬೇಡಿ ಎಂದು ಜನರು ಸಂದೇಶ ನೀಡುತ್ತಾರೆ. ಇಂತಹವಕ್ಕೆಲ್ಲ ಕಿವಿಗೊಡಬೇಡಿ ಕೊರೋನಾ ವೈರಸ್ ಬಗ್ಗೆ ಆತಂಕ ಬೇಡ. ಮುಂಜಾಗ್ರತೆ ವಹಿಸಿ ಎಂದು ಹೇಳಿದರು.
ವೈರಸ್ ಬಗ್ಗೆ ನಿಮಗೆ ಏನಾದರೂ ಸಂದೇಹ, ಸಂಶಯಗಳು ಬಂದರೇ ಆ ಕೂಡಲೇ ವೈದ್ಯರನ್ನು ಸಂಪರ್ಕಿಸಿ. ವೈದ್ಯರ ಸಲಹೆ ಬಳಿಕ ನಿಮ್ಮ ಮುಂದಿನ ನಿಲುವನ್ನು ತೆಗೆದುಕೊಳ್ಳಿ. ಕೊರೋನಾ ವೈರಸ್ ಹರಡುತ್ತಿರುವುದರಿಂದ ಸ್ವಚ್ಛತೆಯಿಂದ. ವೈಯಕ್ತಿಕವಾಗಿ ಸ್ವಚ್ಛತೆ ಕಾಪಾಡಿ. ಮಾಸ್ಕ್ ಗಳು ಹಾಗೂ ಕೈಚೀಲಗಳನ್ನು ಧರಿಸಿ. ಕೈಕುಲುಕುವುದನ್ನು ನಿಯಂತ್ರಿಸಿ. ಭಾರತದ ಸಂಪ್ರದಾಯದಂತೆ ನಮಸ್ಕರಿಸಿ ಶುಭಾಶಯ ತಿಳಿಸಿ ಎಂದು ತಿಳಿಸಿದ್ದಾರೆ. ಇದೀಗ ಇಡೀ ವಿಶ್ವವೇ ಶುಭಾಶಯ ತಿಳಿಸಲು ಭಾರತದ ಸಂಪ್ರದಾಯದಂತೆ ನಮಸ್ತೆಯನ್ನು ಬಳಕೆ ಮಾಡುತ್ತಿದೆ. ನಾವು ಕೂಡ ಅದನ್ನೇ ಅನುಸರಿಸೋಣ ಎಂದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...