Saturday, January 31, 2026

ರಾಜ್ಯದಲ್ಲಿ ಈವರೆಗೆ ಕೊರೊನಾ ವೈರಸ್ ಪತ್ತೆಯಾಗಿಲ್ಲ ಎಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್

ಬೆಂಗಳೂರು: ಸರ್ಕಾರ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮದಿಂದಾಗಿ ರಾಜ್ಯದಲ್ಲಿ ಈವರೆಗೆ ಯಾವುದೇ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇದುವರೆಗೂ ರಾಜ್ಯದಲ್ಲಿ ಎಲ್ಲಿಯೂ ಕೊರೊನಾ ವೈರಸ್ ಬಗ್ಗೆ ಪತ್ತೆಯಾಗಿಲ್ಲ. ಶಂಕಿತ ಪ್ರಕರಣಗಳ ಎಲ್ಲಾ ರಿಪೋರ್ಟ್ ಗಳಲ್ಲೂ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಮಾಹಿತಿ ನೀಡಿದರು. ರಾಜ್ಯ ಸರ್ಕಾರ ಟಾಸ್ಕ್ ಪೋರ್ಸ್ ರಚಿಸಿ ಕೊರೊನಾ ಪ್ರಕರಣಗಳ ಕುರಿತು ತೀವ್ರ ನಿಗಾ ಇರಿಸಲಾಗಿದೆ. ಸರ್ಕಾರ ಈ ಬಗ್ಗೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಈಗಾಗಲೇ 72,542 ಜನರನ್ನು ತಪಾಸಣೆ ಮಾಡಲಾಗಿದೆ. ಕಳೆದ ಎರಡು ದಿನಗಳಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 49,594 ಪ್ರಯಾಣಿಕರ ತಪಾಸಣೆ ನಡೆಸಲಾಗಿದೆ ಎಂದು ಹೇಳಿ ಕೊರೊನಾ ಪತ್ತೆಗಾಗಿ ಹೊಸ ಯಂತ್ರಗಳನ್ನು ಜಿಲ್ಲಾ ಕೇಂದ್ರಗಳಿಗೆ ಕಳುಹಿಸಿಕೊಡಲಾಗುವುದು ಎಂದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...