Thursday, July 10, 2025

ರಾಜ್ಯದಲ್ಲಿ ಮಾ.31ರ ವರೆಗೆ ಕೊರೋನಾ ‘ಬಂದ್’ ಮುಂದುವರಿಕೆ

ಬೆಂಗಳೂರು: ಸಾಂಕ್ರಮಿಕ ರೋಗ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ13 ದಿನ ಬಂದ್ ಮುಂದುವರಿಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾ.31ರ ವರೆಗೆ ಬಂದ್ ವಿಸ್ತರಿಸಲಾಗಿದೆ.
ಮಾಲ್, ಚಿತ್ರಮಂದಿರ, ಉದ್ಯಾನವನ, ಶಾಲಾ-ಕಾಲೇಜು, ಮದುವೆ, ಜಾತ್ರೆ, ಉತ್ಸವ, ಮೇಳ ಬಂದ್ ಮಾಡಲಾಗಿದ್ದು ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳು ಪೂರ್ತಿ ಬಂದ್ ಮುಂದುವರೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ ಸೋಂಕು ನಿಯಂತ್ರಣಕ್ಕೆ ಬಾರದೆ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಂದ್ ಗಡುವು ವಿಸ್ತರಿಸಲಾಗಿದೆ.

ಈ ಸಂದರ್ಭದಲ್ಲಿ ಸೋಂಕು ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಯಿತು. ಈ ಟಾಸ್ಕ್‌‌ ಫೋರ್ಸ್‌ಗಳನ್ನು ಡಾ. ಅಶ್ವಥ್ ನಾರಾಯಣ, ಶ್ರೀರಾಮುಲು, ಬಸವರಾಜ ಬೊಮ್ಮಾಯಿ ಹಾಗೂ ಕೆ. ಸುಧಾಕರ್ ಅವರ ನೇತೃತ್ವದಲ್ಲಿ ರಚಿಸಲಾಯಿತು.

More from the blog

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...