Friday, June 27, 2025

ಕೊರೊನಾ ವಾರಿಯರ್ಸ್‌ ಗಳಿಗೆ ಅಭಿನಂದನೆ

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಲ್ಲಡ್ಕ ವಲಯ, ಮಣಿಕಂಠ ಸ್ವಸಹಾಯ ಸಂಘ ಕುದ್ರೆಬೆಟ್ಟು, ಸುರಕ್ಷಾ ಸ್ವಸಹಾಯ ಸಂಘ ಪೂರ್ಲಿಪಾಡಿ ಇವರ ಜಂಟಿ ಆಶ್ರಯದಲ್ಲಿ ಕೊರೊನಾ ವಾರಿಯರ್ಸ್‌ ಗಳಿಗೆ ಗೌರವ ಅರ್ಪಣೆ ಕಾರ್ಯಕ್ರಮ ಪೂರ್ಲಿಪಾಡಿ ಎಂಬಲ್ಲಿ ನಡೆಯಿತು.


ಕೋವಿಡ್ 19 ನ ಸಂಕಷ್ಟದ ಅವಧಿಯಲ್ಲಿ ಕೆಲಸ ಮಾಡಿದ ಆರೋಗ್ಯ ಕೇಂದ್ರ ದ ಸಿಬ್ಬಂದಿ ಗಳು, ಆಶಾಕಾರ್ಯಕರ್ತೆಯರು, ಪೋಲೀಸ್ ಹಾಗೂ ಮಾಧ್ಯಮದವರಿಗೆ ಗೌರವ ಅರ್ಪಣೆ ಕಾರ್ಯಕ್ರಮ ಬಾಳ್ತಿಲ ಗ್ರಾ.ಪಂ.ಸದಸ್ಯ ವೆಂಕಟರಾಯ ಪ್ರಭು ಅವರ ನೇತ್ರತ್ವದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳ್ತಿಲ ಗ್ರಾ.ಪಂ.ಆಧ್ಯಕ್ಷ ವಿಠಲ ನಾಯ್ಕ ವಹಿಸಿ, ಬಳಿಕ ಮಾತನಾಡಿದ ಅವರು ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ನಮಗಾಗಿ ಕೆಲಸ ಮಾಡಿದ ಕೊರೊನಾ ವಾರಿಯರ್ಸ್‌ ಗಳಿಗೆ ಪಂಚಾಯತ್ ವತಿಯಿಂದ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎ‌.ರುಕ್ಮಯ ಪೂಜಾರಿ, ಗ್ರಾ.ಪಂ.ಉಪಾಧ್ಯಕ್ಷೆ ಪೂರ್ಣಿಮಾ, ಜಿ.ಪಂ.ಮಾಜಿ ಸದಸ್ಯ ಚೆನ್ನಪ್ಪ ಆರ್.ಕೊಟ್ಯಾನ್, ಬಾಳ್ತಿಲ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಿ.ಕೆ.ಅಣ್ಣಿ.ಪೂಜಾರಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಯ ಮೇಲ್ವಿಚಾರಕಿ ಪ್ರೇಮಾ, ಬಾಳ್ತಿಲ ಎ.ಒಕ್ಕೂಟದ ಅಧ್ಯಕ್ಷೆ ಸಂದ್ಯಾ ನಾಯ್ಕ, ಮತ್ತಿತರು ಉಪಸ್ಥಿತರಿದ್ದರು.
ರಾಜೇಶ್ ಬಿ.ಆರ್.ಸ್ವಾಗತಿಸಿ, ಬೋಜರಾಜ್ ಕುದ್ರೆಬೆಟ್ಟು ವಂದಿಸಿದರು. ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...