Thursday, July 10, 2025

ಭಾರತದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಸೊಂಕಿತರ ಸಂಖ್ಯೆ

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಡೀ ದೇಶ ಲಾಕ್ ಡೌನ್ ಮಾಡಿಯೂ ಕಂಟ್ರೋಲ್ ಗೆ ಸಿಗದ ರೀತಿಯಲ್ಲಿ ವೈರಸ್ ಹರಡುತ್ತಿದೆ. ಕರ್ನಾಟಕದಲ್ಲಿಯೂ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ.

ಭಾರತದಲ್ಲಿ ನಾವು ನೋಡ ನೋಡುತ್ತಿದ್ದಂತೆ ಕರೊನಾ ವೈರಸ್​ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಲೆ ಇದೆ. ಪ್ರಸ್ತುತ ಕರೊನಾ ಸೋಂಕಿತರ ಸಂಖ್ಯೆ 14,378ಕ್ಕೆ ಏರಿದ್ದು, 480 ಜನರು ಮೃತಪಟ್ಟಿದ್ದಾರೆ. 1992 ರೋಗಿಗಳು ಕರೊನಾದಿಂದ ಚೇತರಿಸಿಕೊಂಡಿದ್ದಾರೆ ಎಂದು ಇಂದು ಬೆಳಗ್ಗೆ ಆರೋಗ್ಯ ಇಲಾಖೆ ನೀಡಿದ ಮಹತ್ವದ ಮಾಹಿತಿ.

ಎ.18 ಶುಕ್ರವಾರದವರೆಗೆ ಕರೊನಾ ಸೋಂಕಿತರ ಸಂಖ್ಯೆ 13,387 ಇದ್ದು 437 ಮಂದಿ ಕೊರೊನಾ ಪಾಸಿಟಿವ್ ಪ್ರಕರಣದಲ್ಲಿ ಸಾವನ್ನಪ್ಪಿದ್ದರು. 1749 ಮಂದಿ ಡಿಸ್​ಚಾರ್ಜ್​ ಆಗಿದ್ದರು. ಕಳೆದ 24ಗಂಟೆಯಲ್ಲಿ ಎಲ್ಲ ಸಂಖ್ಯೆಯಲ್ಲೂ ಗಣನೀಯವಾಗಿ ಹೆಚ್ಚಾಗಿದೆ ಎಂಬ ಆತಂಕ ದ ಸಂಗತಿ ಬೆಳಕಿಗೆ ಬಂದಿದೆ.

ದೇಶದ್ಯಾದಂತ ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಕರೊನಾ ವಿಪರೀತವಾಗಿ ಬಾಧಿಸುತ್ತಿದೆ ಎಂಬ ಆತಂಕಕಾರಿ ಬೆಳವಣಿಗೆ ಎಲ್ಲ ರನ್ನು ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 3323 ಮಂದಿ ಸೋಂಕಿತರು ಇದ್ದಾರೆ. ದೆಹಲಿಯಲ್ಲಿ 1707, ತಮಿಳುನಾಡಿನಲ್ಲಿ 1323, ರಾಜಸ್ಥಾನದಲ್ಲಿ 1229 ಜನ ವೈರಸ್​ ಪೀಡಿತರು ಇದ್ದಾರೆ. ಹಾಗೇ ಸಾವಿನ ಸಂಖ್ಯೆಯಲ್ಲೂ ಮಹಾರಾಷ್ಟ್ರವೇ ಮುಂದಿದೆ. ಅಲ್ಲಿ ಬರೋಬ್ಬರಿ 201ಮಂದಿ ಕೊವಿಡ್​ನಿಂದ ಮೃತಪಟ್ಟಿದ್ದಾರೆ.

ಪ್ರಸ್ತುತ ದೇಶದ ಎಲ್ಲ ರಾಜ್ಯಗಳಲ್ಲೂ ಕರೊನಾ ವೈರಸ್​ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ತೋರಿಸುತ್ತಿದ್ದು, ಸದ್ಯ ಭಾರತದಲ್ಲಿ ಎರಡನೇ ಹಂತದ ಲಾಕ್​ಡೌನ್​ ಇದೆ. ಇದು ಮುಗಿಯುವ ಹೊತ್ತಿಗಾದರೂ ಕರೊನಾ ಪ್ರಮಾಣ ಕಡಿಮೆ ಆಗಲಿ ಎಂಬುದೇ ಎಲ್ಲರ ಹಾರೈಕೆ.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...