ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯ ಬಂಟ್ವಾಳ ಪೇಟೆಯಲ್ಲಿನ ಮಹಿಳೆ ವೃದ್ದೆಯೋರ್ವರಿಗೆ ಪಾಸಿಟಿವ್ ಎಂದು ರಿಪೋರ್ಟ್ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ಇದಾಗಿದೆ.

78 ವರ್ಷದ ವೃದ್ದೆಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. P390 ಸಂಪರ್ಕದಿಂದ ವೃದ್ದೆಗೆ ಹರಡಿರುವ ಕೊರೋನ ಸೋಂಕು ದೃಢ ಎಂದು ಜಿಲ್ಲಾಡಳಿತ ರಿಪೋರ್ಟ್ ನೀಡಿದೆ.
ಬಂಟ್ವಾಳ ಒಂದೇ ಜಾಗದಲ್ಲಿ ಮೂರನೇ ಪ್ರಕರಣ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬಂಟ್ವಾಳ ಒಂದೇ ಪ್ರದೇಶದ ಕೊರೊನಾ ಪಾಸಿಟಿವ್ ಪ್ರಕರಣದಲ್ಲಿ ಓರ್ವ ಮಹಿಳೆ ಸಾವು, ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ.
ಮೃತ ಮಹಿಳೆಯಿಂದ ಹರಡಿದ ಕೊರೋನ ಸೋಂಕು ಇದಾಗಿದ್ದು, ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಇಂದು ಪಾಸಿಟಿವ್ ರಿಪೋರ್ಟ್ ಬಂದಿರುವ ಮಹಿಳೆ ಕಳೆದ ಒಂದು ತಿಂಗಳಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆ ಯೊಂದರಲ್ಲಿ ಮೆದುಳಿನ ಕಾಯಿಲೆಗೆಂದು ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಘಟಕದಲ್ಲಿದ್ದರು.
ಮನೆಯ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಇವರ ಗಂಟಲು ದ್ರವ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇಂದು ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಪಾಸಿಟಿವ್ ಎಂದು ಹೇಳಲಾಗಿದೆ.

