ದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 2,34,692 ಮಂದಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿದೆ ಎಂದು ತಿಳಿದು ಬಂದಿದೆ.


ಒಂದೇ ದಿನ ದೇಶದಲ್ಲಿ ಕೊರೋನ ಸೋಂಕಿಗೆ 1,341 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ. ಹಾಗೆಯೇ ಒಟ್ಟು ಸಾವಿನ ಸಂಖ್ಯೆ 1,75,649ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,79,740 ಆಗಿದ್ದು ಕಳೆದ 24 ಗಂಟೆಗಳಲ್ಲಿ 1,23,354 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 1,26,71,220 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 26,34,76,625 ಮಂದಿಯನ್ನು ಕೊರೋನ ಪರೀಕ್ಷೆಗೊಳಪಡಿಸಲಾಗಿದೆ. ಶುಕ್ರವಾರ ಒಂದೇ ದಿನ 14,95,397 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ವರದಿ ತಿಳಿಸಿದೆ.












