Monday, January 26, 2026

ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆ: ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಮತ್ತೆ ರಾಜ್ಯದಲ್ಲಿ ಹೊಸದಾಗಿ 34 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ರಾಜ್ಯ ಆರೋಗ್ಯ ಇಲಾಖೆ ಮಧ್ಯಾಹ್ನದ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ಇದೆ. ಇಂದು ಹೊಸದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 34 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಲ್ಲಿರುವಂತೆ ಬೆಂಗಳೂರಿನ ನಾಲ್ವರಿಗೆ, ಬೆಳಗಾವಿಯ 17 ಜನರಿಗೆ, ಕಲಬುರ್ಗಿಯಲ್ಲಿ ಒಬ್ಬರಿಗೆ, ಮೈಸೂರಿನ ಮೂವರಿಗೆ ಹಾಗೂ ವಿಜಯಪುರದ ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ. ಇದುವರೆಗೆ ಕೊರೊನಾ ಸೋಂಕಿನಿಂದ 13 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, 82 ಕೊರೊನಾ ವೈರಸ್ ಸೋಂಕು ಪೀಡಿತರು ಗುಣಮುಖರಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ಇದೆ.

 

More from the blog

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...