Friday, June 27, 2025

ಕೊರೊನಾ ಸೋಂಕಿತೆಗೆ ಹೆರಿಗೆ: ತಾಯಿ – ಮಗು ಕ್ಷೇಮ

ಮಂಗಳೂರು : ಮುಂಬೈನಿಂದ ಆಗಮಿಸಿದ್ದ ಕೊರೊನಾ ಸೋಂಕು ತಗುಲಿದ್ದ ಗರ್ಭಿಣಿಗೆ ನಗರದ ಜಿಲ್ಲಾ ಕೊರೊನಾ ವೆನ್ಲಾಕ್‌‌‌ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಮಂಗಳೂರು ಸಮೀಪದ ಹಳ್ಳಿಯೊಂದರ ಮಹಿಳೆ ಸೋಮವಾರವಷ್ಟೇ ಮುಂಬೈನಿಂದ ಮಂಗಳೂರಿಗೆ ಆಗಮಿಸಿದ್ದರು. ನಿಶ್ಶಕ್ತಿಯಿಂದ ಬಳಲುತ್ತಿದ್ದ ಹಿನ್ನೆಲೆ ಆಕೆ ಮಂಗಳವಾರ ನಗರದ ಲೇಡಿಗೋಶನ್‌‌ ಆಸ್ಪತ್ರೆಗೆ ಬಂದಿದ್ದರು. ಅವರನ್ನು ತಪಾಸಣೆ ಮಾಡಿದ ಸಂದರ್ಭ ಅವರು ಮುಂಬೈನಿಂದ ಬಂದಿದ್ದಾರೆ ಎಂದು ತಿಳಿದ ವೈದ್ಯರು ಅವರನ್ನು ಆಸ್ಪತ್ರೆಯಲ್ಲೇ ಕ್ವಾರಂಟೈನ್‌‌ಗೆ ಒಳಪಡಿಸಿದ್ದರು.

ಬುಧವಾರ ಅವರ ಗಂಟಲ ದ್ರವದ ಮಾದರಿ ವರದಿಯು ಪಾಸಿಟಿವ್‌‌ ಬಂದಿದ್ದು, ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿತ್ತು. ಗುರುವಾರ ಬೆಳಗ್ಗೆ ಹೆರಿಗೆ ನೋವು ಕಂಡು ಬಂದ ಹಿನ್ನೆಲೆ ನುರಿತ ತಜ್ಞರ ತಂಡ ಸಿಸೇರಿಯನ್‌‌‌‌ ಮೂಲಕ ಸುಸೂತ್ರ ಹೆರಿಗೆ ಮಾಡಿಸಿದ್ದಾರೆ ಎಂದು ಕೊರೊನಾ ವೆನ್ಲಾಕ್‌‌‌ ಆಸ್ಪತ್ರೆಯ ವೈದ್ಯಾಧಿಕಾರಿ ತಿಳಿಸಿದ್ದಾರೆ.
ಮಗು ಆರೋಗ್ಯವಾಗಿದೆ. ತಾಯಿಗೆ ಬಿಪಿ, ದೇಹದಲ್ಲಿ ನೀರು ಕಡಿಮೆ ಇದ್ದ ಕಾರಣ ಸಿಸೇರಿಯನ್‌‌ ಹೆರಿಗೆ ಮಾಡಿಸಲಾಗಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...