Thursday, January 29, 2026

12 ದಿನಗಳ ಬಳಿಕ ಮತ್ತೆ ದ.ಕ.ಜಿಲ್ಲೆಯಲ್ಲಿ ಕೊರೊನ ಪಾಸಿಟಿವ್

ಬಂಟ್ವಾಳ: ಕಳೆದ 12 ದಿನದಿಂದ ನೆಮ್ಮದಿಯಿಂದ ಇದ್ದ ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಆತಂಕ ಶುರುವಾಗಿದೆ. ದೆಹಲಿಗೆ ತೆರಳಿದ್ದ ಉಪ್ಪಿನಂಗಡಿ ನಿವಾಸಿಗೆ ಕೊರೋನಾ ಪಾಸಿಟಿವ್.

ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಮಾ.21ರಂದು ನಿಜಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ಆಗಮಿಸಿದ್ದರು. ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ವ್ಯಕ್ತಿಯನ್ನು ಪತ್ತೆ ಮಾಡಿದ್ದ ಜಿಲ್ಲಾಡಳಿತ. ಆ ವ್ಯಕ್ತಿಯನ್ನ ಕ್ವಾರಂಟೈನ್ ಮಾಡಿ ಗಂಟಲ ದ್ರಾವಣ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಬಂದ ವರದಿಯಲ್ಲಿ 39 ವರ್ಷದ ಯುವಕನಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.

ಮಾ.23ರಿಂದಲೇ ಮಂಗಳೂರಿನಲ್ಲಿ ಕ್ವಾರೆಂಟೈನ್ ನಲ್ಲಿರುವ ವ್ಯಕ್ತಿ. ಮಾ.20ರಂದು ನಿಜಾಮುದ್ದೀನ್ ರೈಲಿನಲ್ಲಿ ಬಂದು ಮಾ.21ರಂದು ಮಂಗಳೂರಿಗೆ ಆಗಮಿಸಿದ್ದ. ನಿಝಾಮುದ್ದೀನ್ ಏರಿಯಾದ ಟವರ್ ಲೊಕೇಶನ್ ಆಧಾರದಲ್ಲಿ ಈ ವ್ಯಕ್ತಿ ಸೇರಿ 26 ಜನ ಕ್ವಾರಂಟೈನ್ ನಲ್ಲಿದ್ದರು.

ತಬ್ಲೀಕ್ ಮಸೀದಿ ತೆರಳಿದ ಮತ್ತು ಆ ಪ್ರದೇಶದಲ್ಲಿ ಸುತ್ತಾಡಿದ ಜಿಲ್ಲೆಯ 29 ಮಂದಿ ಕ್ವಾರಂಟೈನ್ ಮಾಡಲಾಗಿತ್ತು. ಈತನ ಜೊತೆ ತೆರಳಿದ್ದ ತುಂಬೆ ಗ್ರಾಮದ ವ್ಯಕ್ತಿಗೆ ಎ.4ರಂದೇ ಕೊರೋನ ಪಾಸಿಟಿವ್ ಆಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 12 ದಿನದಿಂದ ಒಂದೇ ಒಂದು ಕೇಸ್ ಕೂಡ ಪತ್ತೆಯಾಗಿರಲಿಲ್ಲ.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...