Tuesday, January 27, 2026

ದ.ಕ.ಜಿಲ್ಲೆಯಲ್ಲಿ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ ದೃಢ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

ದ.ಕ‌.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ ಮಹಿಳೆಯೊರ್ವರಿಗೆ ಇಂದು ಕೊರೊನ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಬಂಟ್ವಾಳ ಪೇಟೆಯಲ್ಲಿ ಒಟ್ಟು ನಾಲ್ಕು ಪಾಸಿಟಿವ್ ಪ್ರಕರಣ ಬಂದಂತಾಗಿದೆ. ಕೊರೊನಾ ಪಾಸಿಟಿವ್ ನಿಂದ ಚಿಕಿತ್ಸೆ ಪಡೆದ ಬಳಿಕ ಮೃತಪಟ್ಟ ಮಹಿಳೆಯರ ಪಕ್ಕದ ಮನೆಯ ಮಹಿಳೆ ಇವರು ಎಂದು ತಿಳಿದು ಬಂದಿದೆ. ಇಂದು ಕೊರಾನ ಪಾಸಿಟಿವ್ ದೃಢವಾದ ಮಹಿಳೆಯ ತಾಯಿ ಈಗಾಗಲೇ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಿಳೆಯ ಗಂಡ ವಿದೇಶದಲ್ಲಿರುವುದರಿಂದ ಬಂಟ್ವಾಳ ಪೇಟೆಯಲ್ಲಿರುವ ತಾಯಿ ಮನೆಯಲ್ಲಿಯೇ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ತಾಯಿಗೆ ಕೊರೊನ ಪಾಸಿಟಿವ್ ದೃಢವಾದ ಕೂಡಲೇ ಮನೆಯ ಎಲ್ಲಾ ಸದಸ್ಯರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇಂದು ಪಾಸಿಟಿವ್ ದೃಢವಾದ ಮಹಿಳೆ ಮಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿದುಬಂದಿದೆ.

ಬಂಟ್ವಾಳ ತಾಲೂಕಿನಲ್ಲಿ ಈವರಗೆ ಒಟ್ಟು 6 ಪ್ರಕರಣಗಳು ದಾಖಲಾದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖೈ 18ಕ್ಕೆ ಏರಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...