Tuesday, February 3, 2026

ಸಚಿವ ಸುರೇಶ್ ಕಮಾರ್ ಆಪ್ತ ಸಹಾಯಕ ಕೊರೋನ ಸೋಂಕಿಗೆ ಬಲಿ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕಮಾರ್ ಅವರ ಆಪ್ತ ಸಹಾಯಕ ಕೊರೋರ ಸೋಂಕಿನಿAದ ಸೋಮವಾರ ಮೃತಪಟ್ಟಿದ್ದಾರೆ.

ಎಚ್.ಜೆ. ರಮೇಶ್ ಕೊರೋನದಿಂದ ಮೃತಪಟ್ಟ ಸಚಿವರ ಆಪ್ತ ಸಹಾಯಕ. ಅವರಿಗೆ ಏ.13ರಂದು ಕೊರೋನ ಸೋಂಕು ದೃಢಪಟ್ಟಿತ್ತು. ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ 9.30ಕ್ಕೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ರಮೇಶ್ ಸಾವಿನ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುರೇಶ್‌ಕುಮಾರ್, ‘ನಮ್ಮ ಕ್ಷೇತ್ರದ (ರಾಜಾಜಿನಗರ) ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ ಎಚ್.ಜೆ.ರಮೇಶ್ ಇನ್ನಿಲ್ಲ. ರಮೇಶ್ ಸುಮಾರು ಎಂಟು ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ ಎಂದಿದ್ದಾರೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...