Saturday, January 31, 2026

ಕೊರೋನ ದಿನದ ಗರಿಷ್ಠ ಪ್ರಕರಣ: ವಿಶ್ವದಲ್ಲೇ ಮೊದಲ ಸ್ಥಾನಕ್ಕೆ ತಲುಪಿದ ಭಾರತ!!!

ಹೊಸದಿಲ್ಲಿ: ಜಗತ್ತನ್ನೇ ಅಲ್ಲೋಲಕಲ್ಲೋಲ ಮಾಡಿರುವ ಮಹಾ ಮಾರಿ ಕೊರೋನ ವೈರಸ್ ಒಂದೇ ದಿನ ಅತೀ ಹೆಚ್ಚು ಮಂದಿಯಲ್ಲಿ ಪತ್ತೆಯಾದ ದೇಶಗಳ ಪೈಕಿ ಭಾರತ ಒಂದನೇ ಸ್ಥಾನಕ್ಕೆ ಬಂದು ನಿಂತಿದೆ.

ಬುಧವಾರ ಭಾರತದಲ್ಲಿ 3,15,925 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಇದಕ್ಕೂ ಮೊದಲು ವಿಶ್ವದಲ್ಲೇ ಅತ್ಯಧಿಕ ಎಂದರೆ 3,07,581 ಪ್ರಕರಣಗಳು ಅಮೆರಿಕದಲ್ಲಿ ಜನವರಿ 8ರಂದು ವರದಿಯಾಗಿತ್ತು. ಇದೀಗ ಒಂದೇ ದಿನ ವಿಶ್ವದಲ್ಲೇ ಅತ್ಯಧಿಕ ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾದ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಏರಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನ ಸೋಂಕಿನಿAದ 2104 ಮಂದಿ ಮೃತಪಟ್ಟಿದ್ದು ದೇಶದಲ್ಲಿ ಒಂದೇ ದಿನ ದಾಖಲಾದ ಗರಿಷ್ಠ ಸಾವು ಇದಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,59,30,965ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 1,84,657ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,91,428ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,78,841 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,34,54,880ಕ್ಕೆ ತಲುಪಿದೆ. ಭಾರತದಲ್ಲಿ ಬುಧವಾರ ಒಂದೇ ದಿನ 16,51,711 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು ಈವರೆಗೂ 27,27,05,103 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...