ಬಂಟ್ವಾಳ: ಗ್ರಾಮ ಪಂಚಾಯತ್ ಸಭಾಂಗಣದವೊಂದರಲ್ಲಿ ಕೋವಿಡ್ ನಿಯಮಗಳನ್ನು ಮೀರಿ ರಾಜಕೀಯ ಸಭೆಯೊಂದನ್ನು ನಡೆಸಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಯವರಿಗೆ ದೂರು ನೀಡಿದ ಘಟನೆ ನಾವೂರದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ನಾವೂರ ಗ್ರಾ.ಪಂನ ಸಭಾಂಗಣದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಅನಧಿಕೃತ ರಾಜಕೀಯ ಸಭೆಯೊಂದನ್ನು ಸಭೆಯನ್ನು ನಡೆಸಿದ್ದಾರೆ ಎಂದು ನಾವೂರ ಗ್ರಾಮ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ಅವರು ಅವರು ಜಿಲ್ಲಾಧಿಕಾರಿ ಹಾಗೂ ದ.ಕ.ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದಾರೆ.
50 ಸದಸ್ಯರನ್ನು ಸೇರಿಸಿ ಗ್ರಾ.ಪಂ. ಸಭಾಂಗಣದಲ್ಲಿ ರಾಜಕೀಯ ನಾಯಕರು ರಾಜಕೀಯ ಸಭೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
