Thursday, June 26, 2025

ಕೋವಿಡ್ ನಿರ್ವಹಣೆಯಲ್ಲಿ ಬಂಟ್ವಾಳ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಾ| ಅಶ್ವಥ್ ನಾರಾಯಣ್

ಬೆಂಗಳೂರು: ರಾಜ್ಯ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬೇಟಿ ಮಾಡಿ ಪ್ರಸ್ತುತ ತಾಲೂಕಿನ ಕೋವಿಡ್ ಸ್ಥಿತಿ ಗತಿಯ ಬಗ್ಗೆ ಚರ್ಚಿಸಿದರು.ಹಾಗೂ ಕೋವಿಡ್ ನಿರ್ವಹಣೆಯಲ್ಲಿ ಬಂಟ್ವಾಳ ತಾಲೂಕಿನ ಅಧಿಕಾರಿಗಳ ತಂಡದ ಕಾರ್ಯವೈಖರಿ, ಮತ್ತು ನಿಯಂತ್ರಣ ಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು.

ತಾಲೂಕಿನಲ್ಲಿ ಕೋವಿಡ್ ವಿಚಾರಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಯಾವುದೇ ಸಮಸ್ಯೆ ಯಾಗದಂತೆ ನಿರ್ವಹಿಸದ ಬಗ್ಗೆ ಯೂ ಮಾಹಿತಿ ನೀಡಲಾಯಿತು.

ಕೋವಿಡ್ ನಿರ್ವಹಣೆ ಮತ್ತು ಈ ಸಂದರ್ಭದಲ್ಲಿ ಶಾಸಕರ ಕಾರ್ಯ ನಿರ್ವಹಣೆ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಬಂಟ್ವಾಳ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಶಾಸಕರ ಆಪ್ತ ಕಾರ್ಯದರ್ಶಿ ಪವನ್ ಕುಮಾರ್ ಹಾಜರಿದ್ದರು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...