ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 208 ಹೊಸ ಕೋವಿಡ್ ಸೋಂಕು ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 5311ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ 208 ಕೇಸ್ ಗಳ ಪೈಕಿ 65 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 12 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದ್ದು, 58 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ
ಜಿಲ್ಲೆಯಲ್ಲಿ 2715 ಸಕ್ರೀಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ 118 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 2556 ಮಂದಿ ಗುಣಮುಖರಾಗಿ ಬಿಡುಗಡೆಯಾದ ಬಗ್ಗೆ ವರದಿಯಾಗಿದೆ.
ಇಂದು ಜಿಲ್ಲೆಯಲ್ಲಿ 69 ವರ್ಷದ ಮಹಿಳೆ, 52, 62, 73, 60, 66, 39 ವರ್ಷಗಳ ಪುರುಷರು ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು 7 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಆ ಮೂಲಕ 142 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.


