Monday, January 26, 2026

ದ. ಕ. ಜಿಲ್ಲೆಯಲ್ಲಿ ಇಂದು 307 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 307 ಕೋವಿಡ್ ಕೇಸ್ ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8378ಕ್ಕೆ ಏರಿಕೆಯಾಗಿದೆ.
ಇಂದು 6 ಮಂದಿ ಸೋಂಕಿತರು ಮೃತಪಟ್ಟಿದ್ದು, ಒಟ್ಟು 256 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇಂದು ದೃಢಪಟ್ಟ ಸೋಂಕಿತರ ಪೈಕಿ ಮಂಗಳೂರಿನ 197, ಬಂಟ್ವಾಳ 57, ಪುತ್ತೂರು 14, ಸುಳ್ಯ 17, ಬೆಳ್ತಂಗಡಿ 14 ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಸೋಂಕು ತಗಲಿರುವ ಬಗ್ಗೆ ವರದಿಯಾಗಿದೆ.
ಇಂದು ಪತ್ತೆಯಾದ 307 ಪ್ರಕರಣಗಳಲ್ಲಿ 44 ಪ್ರಾಥಮಿಕ ಸಂಪರ್ಕದಿಂದ ದೃಢಪಟ್ಟಿದ್ದು, 124ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಇಂದು ಜಿಲ್ಲೆಯಲ್ಲಿ 242 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 6115 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 2007 ಸಕ್ರೀಯ ಪ್ರಕರಣಗಳಿವೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...