Saturday, July 12, 2025

ಇಂದು ದ.ಕ. ಜಿಲ್ಲೆಯಲ್ಲಿ 89 ಹೊಸ ಕೋವಿಡ್ ಕೇಸ್ ಪತ್ತೆ

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 89 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 3685ಕ್ಕೆ ಏರಿಕೆಯಾಗಿದೆ.
ಇಂದಿನ 89 ಕೇಸ್ ಗಳ ಪೈಕಿ 11 ಕೇಸ್ ಪ್ರಾಥಮಿಕ ಸಂಪರ್ಕದಿಂದ ದೃಢಪಟ್ಟಿದೆ. 45 ಮಂದಿಯಲ್ಲಿ ಐ.ಎಲ್.ಐ. ಪ್ರಕರಣ ದೃಢಪಟ್ಟಿದೆ. 16 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟರೆ, ಇಬ್ಬರು ವಿದೇಶದಿಂದ ಬಂದವರಿದ್ದಾರೆ. 15 ಮಂದಿಯ ಸೋಂಕಿನ ಮೂಲ ಇನ್ನಷ್ಟೇ ಪತ್ತೆ ಮಾಡಬೇಕಿದೆ ಎಂದು ದ.ಕ. ಜಿಲ್ಲೆಯ ವರದಿಯಲ್ಲಿ ತಿಳಿದು ಬಂದಿದೆ.
ಜಿಲ್ಲೆಯಲ್ಲಿ ಇಂದು 57 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1548 ಮಂದಿ ಗುಣಮುಖರಾದ ಬಗ್ಗೆ ವರದಿಯಾಗಿದೆ.
ಇಂದು 55, 63 ವರ್ಷದ ಮಂಗಳೂರು ಮೂಲದ, 42 ವರ್ಷದ ಬೆಳ್ತಂಗಡಿ ನಿವಾಸಿ ಹಾಗೂ 65 ವರ್ಷದ ಚಿಕ್ಕಮಗಳೂರು ಮೂಲದ ವ್ಯಕ್ತಿಗಳೆಲ್ಲರೂ ಪುರುಷರು ಸಹಿತ ಬಂಟ್ವಾಳ ಮೂಲದ 2 ತಿಂಗಳ ಮಗು ಒಟ್ಟು 5 ಮಂದಿ ಸೋಂಕಿತರು ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 80 ಸೋಂಕಿತರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಸದ್ಯ ಜಿಲ್ಲೆಯಲ್ಲಿ 2055 ಸಕ್ರೀಯ ಪ್ರಕರಣಗಳಿವೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...