Thursday, July 10, 2025

ರಾಜ್ಯದಲ್ಲಿ ಇಂದು 141 ಹೊಸ ಕೊರೋನಾ ಕೇಸ್: ದ.ಕ. 14 ಕೇಸ್

ಬಂಟ್ವಾಳ: ರಾಜ್ಯದಲ್ಲಿ ಇಂದು ಒಟ್ಟು 141 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ.
ಬೆಳಿಗ್ಗೆ ಹಾಗೂ ಸಂಜೆಯ ಹೆಲ್ತ್ ಬುಲೆಟಿನ್ ಸಂಜೆಯೇ ಬಿಡುಗಡೆ ಮಾಡಿದ್ದೂ, ಒಟ್ಟು 141 ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ 33, ಯಾದಗಿರಿ 18, ದ.ಕ. 14, ಉಡುಪಿ, ಹಾಸನ ತಲಾ 13, ವಿಜಯಪುರ 11, ಬೀದರ್ 10, ಶಿವಮೊಗ್ಗ 6, ದಾವಣಗೆರೆ, ಹಾವೇರಿ ತಲಾ 4, ಕೋಲಾರ 3, ಕಲಬುರಗಿ, ಉ.ಕ., ಧಾರವಾಡ, ಮೈಸೂರ್ ತಲಾ 2, ಬೆಳಗಾವಿ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ತಲಾ 1 ಕೇಸ್ ಪತ್ತೆಯಾದ ಬಗ್ಗೆ ಇಂದು ಸಂಜೆಯ ಬುಲೆಟಿನ್ ನಲ್ಲಿ ವರದಿಯಾಗಿದೆ.
141 ರಲ್ಲಿ ಹೊರ ರಾಜ್ಯದಿಂದ ಬಂದ 90 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ.
ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿಗೆ ಬೀದರ್ ನ 47 ವರ್ಷದ ಮಹಿಳೆ ಬಲಿಯಾಗಿದ್ದು, ಸಾವಿನ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 103 ಮಂದಿ ಕೊರೋನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾಗಿ 997 ಮಂದಿ ಕೊರೋನಾ ಮುಕ್ತರಾಗಿದ್ದಾರೆ.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...