Tuesday, July 8, 2025

ರಾಜ್ಯದಲ್ಲಿ ಇಂದು 378 ಹೊಸ ಕೊರೋನಾ ಕೇಸ್ ಪತ್ತೆ: ದ.ಕ. ಜಿಲ್ಲೆಯಲ್ಲಿ 24 ಕೇಸ್

ಬಂಟ್ವಾಳ: ರಾಜ್ಯದಲ್ಲಿ ಇಂದು 378 ಹೊಸ ಕೊರೋನಾ ಕೇಸ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದೆ.

ಉಡುಪಿ 121, ಯಾದಗಿರಿ 103, ಕಲಬುರಗಿ 69, ದ.ಕ. 24, ಬೆಂಗಳೂರು ನಗರ 18, ದಾವಣಗೆರೆ, ವಿಜಯಪುರ ತಲಾ 6, ಬೆಳಗಾವಿ 5, ಗದಗ 4, ಹಾಸನ, ಮಂಡ್ಯ, ಹಾವೇರಿ, ಧಾರವಾಡ ತಲಾ 3, ಚಿಕ್ಕಬಳ್ಳಾಪುರ, ರಾಯಚೂರು ತಲಾ 2, ಮಂಡ್ಯ, ಕೊಪ್ಪಳ, ಬೀದರ್ 1 ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.

ದ.ಕ. ಜಿಲ್ಲೆಯಲ್ಲಿ ಪತ್ತೆಯಾದ 5 ಪ್ರಕರಣಗಳಿಗೆ ಸೋಂಕಿನ ಮೂಲ ಪತ್ತೆಯಾಗಿಲ್ಲ. ಜಿಲ್ಲೆಯ ಪ್ರಕರಣಗಳಲ್ಲಿ 4 ಪ್ರಕರಣಗಳು ಬೆಳ್ತಂಗಡಿ ತಾಲೂಕಿನದ್ದು ಎಂಬ ಮಾಹಿತಿ ಇದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ 280 ಮಂದಿ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1968 ಮಂದಿ ಗುಣಮುಖರಾದ ಬಗ್ಗೆ ವರದಿಯಾಗಿದೆ.

ಕೋವಿಡ್ ಸೋಂಕಿಗೆ ರಾಜ್ಯದಲ್ಲಿ ಇಂದು 2 ಬಲಿಯಾಗಿದ್ದು,  ವಿಜಯಪುರದ 81 ವರ್ಷದ ಹಾಗೂ ಬೀದರ್ ನ 59 ವರ್ಷದ ವೃದ್ಧೆಯರು ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ 59ಕ್ಕೆ ಏರಿದೆ.

More from the blog

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ..

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌ ಲಸಿಕೆ...

ಸರಪಾಡಿ : 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಬಜ ಆಯ್ಕೆ..

ಬಂಟ್ವಾಳ : ಶರಭೇಶ್ವರ ದೇವಸ್ಥಾನ ಸರಪಾಡಿ ಇದರ 34ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 3ನೇ ಬಾರಿ ಚೇತನ್ ಬಜ ಆಯ್ಕೆಯಾಗಿದ್ದಾರೆ.    

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...