ಬಂಟ್ವಾಳ: ರಾಜ್ಯದಲ್ಲಿ ಇಂದು 1839 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 21549 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ ಒಂದರಲ್ಲೇ ಅತೀ ಹೆಚ್ಚು, ಎಂದರೆ 1172 ಕೇಸ್ ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ 75 ಕೇಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1087 ಕ್ಕೆ ಏರಿಕೆಯಾಗಿದೆ.
ಇನ್ನು ಬಳ್ಳಾರಿ 73, ಬೀದರ್ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬುರಗಿ, ವಿಜಯಪುರ ತಲಾ 37, ಮಂಡ್ಯ, ಉ.ಕ. ತಲಾ 35, ಶಿವಮೊಗ್ಗ 31, ಹಾವೇರಿ 28, ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ, ತುಮಕೂರು ತಲಾ 12, ಬೆಂಗಳೂರು ಗ್ರಾಮಾಂತರ, ಕೋಲಾರ 11, ದಾವಣಗೆರೆ 7, ಚಾಮರಾಜನಗರ 4, ಕೊಪ್ಪಳ, ಚಿಕ್ಕಮಗಳೂರು ತಲಾ 3, ರಾಮನಗರ 2, ಯಾದಗಿರಿ 1 ಕೇಸ್ ಪತ್ತೆಯಾಗಿದೆ.
ಇಂದು ರಾಜ್ಯದಲ್ಲಿ 439 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 9244 ಮಂದಿ ಗುಣಮುಖರಾದ ಬಗ್ಗೆ ವರದಿಯಾಗಿದೆ. ಇಂದು 42 ಸೋಂಕಿತರು ಮೃತಪಟ್ಟಿದ್ದು, ಒಟ್ಟು 335 ಮಂದಿ ಸೋಂಕಿತರು ಬಲಿಯಾಗಿದ್ದಾರೆ.


