Thursday, July 10, 2025

ಉಡುಪಿ: ಇಂದು 300ಕ್ಕೂ ಹೆಚ್ಚು ಕೋವಿಡ್-19 ಪಾಸಿಟಿವ್ ಸಾಧ್ಯತೆ – ಸಚಿವ ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಜೂನ್ 5 ರಂದು ಉಡುಪಿಯಲ್ಲಿ 300 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾಗುವ ನಿರೀಕ್ಷೆಯಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಉಡುಪಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಜೂನ್ 5 ರ ಶುಕ್ರವಾರದಂದು ಸುಮಾರು 300 ರಿಂದ 350 ಪ್ರಕರಣಗಳು ನಿರೀಕ್ಷೆಯಿದೆ. ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ನಿಯಂತ್ರಿಸುವ ಸಭೆಯನ್ನು ಈಗಾಗಲೇ ಆ ಜಿಲ್ಲೆಗಳ ಅಧಿಕಾರಿಗಳೊಂದಿಗೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಧಾರ್ಮಿಕ ಸ್ಥಳಗಳು ಮತ್ತು ಶಾಲೆಗಳನ್ನು ತೆರೆದರೆ ಇನ್ನೂ ಹೆಚ್ಚಿನ ಅಪಾಯಕ್ಕೆ ಆಹ್ವಾನ ನೀಡಿದಂತಾಗುತ್ತದೆ. ಸಾಂಕ್ರಾಮಿಕ ಕೊರೊನಾ ವೈರಸ್ ನಿಂದ ನಮ್ಮನ್ನು ನಾವು ಕಾಪಾಡಿಕೊಂಡು ಬದುಕಲು ಕಲಿಯಬೇಕಾಗಿದೆ. ಸಾಮಾಜಿಕ ಅಂತರವನ್ನು ಎಲ್ಲಾ ಸಮಯದಲ್ಲೂ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಮಹಾರಾಷ್ಟ್ರದಿಂದ ಉಡುಪಿಗೆ ಆಗಮಿಸಿರುವವರಲ್ಲಿ ಶೇ.9೦ ರಷ್ಡು ಮಂದಿಯಲ್ಲಿ ಕೋವಿಡ್-19 ಪಾಸಿಟಿವ್ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 563 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ ಒಟ್ಟು 108 ಜನರನ್ನು ಬಿಡುಗಡೆ ಮಾಡಲಾಗಿದೆ ಹಾಗೂ 454 ಪ್ರಕರಣ ಸಕ್ರಿಯವಾಗಿವೆ ಎಂದು ಮಾಹಿತಿಯನ್ನು ಸಚಿವ ಡಾ.ಕೆ.ಸುಧಾಕರ್ ನೀಡಿದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...