Tuesday, July 15, 2025

ವಿಶ್ವದಲ್ಲಿ ಕೊರೊನಾ ಸೋಂಕಿಗೆ 3.71 ಲಕ್ಷ ಮಂದಿ ಬಲಿ, ಸೋಂಕಿತರ 61.60 ಲಕ್ಷಕ್ಕೆ ಏರಿಕೆ

ನವದೆಹಲಿ : ಕೊರೊನಾ ಸೋಂಕಿಗೆ ವಿಶ್ವದ 215 ರಾಷ್ಟ್ರಗಳಲ್ಲಿ ಒಟ್ಟು ಸಾವಿನ ಸಂಖ್ಯೆ ಭಾನುವಾರ 3.71 ಲಕ್ಷ ತಲುಪಿದ್ದು, ಸೋಂಕಿತರ ಸಂಖ್ಯೆ 61.60 ಲಕ್ಷಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಅಮೆರಿಕಾ ಒಂದರಲ್ಲೇ ಮೃತಪಟ್ಟವರ ಸತ್ತವರ ಸಂಖ್ಯೆ 1.05 ಲಕ್ಷ ತಲುಪಿದೆ.

ಭಾರತದಲ್ಲಿ ಈವರೆಗೆ 182,143 ಪ್ರಕರಣಗಳು ದಾಖಲಾಗಿವೆ. ಮೃತಪಟ್ಟವರ ಸಂಖ್ಯೆ 5185ಕ್ಕೆ ಏರಿದೆ. ಬ್ರಿಟನ್‌‌ನಲ್ಲಿ 272,826 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 38,376 ಮಂದಿ ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ 232,664 ಪ್ರಕರಣಗಳು ದಾಖಲಾಗಿದ್ದು, 33,340 ಮಂದಿ ಮೃತಪಟ್ಟಿದ್ದಾರೆ. ಸ್ಪೇನ್‌‌ನಲ್ಲಿ 286,308 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 33,340 ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದಲ್ಲಿ 69,496 ಪ್ರಕರಣಗಳು ದಾಖಲಾಗಿದ್ದು, 1,483 ಮಂದಿ ಮೃತಪಟ್ಟಿದ್ದಾರೆ.

ಇಲ್ಲಿಯವರೆಗೆ ಅಮೆರಿಕದಲ್ಲಿ ಕೊರೊನಾ ಸೋಂಕಿಗೆ ಒಟ್ಟು 105,557 ಮಂದಿ ಮೃತಪಟ್ಟಿದ್ದಾರೆ. ಇಲ್ಲಿ ಒಟ್ಟು 18.16 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ 11.76 ಲಕ್ಷ ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 53.52 ಸಾವಿರ ಮಂದಿ ಗುಣಮುಖರಾಗಿದ್ದಾರೆ. 17 ಸಾವಿರ ಮಂದಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

ವಿಶ್ವದಾದ್ಯಂತ 61.60 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ 27.38 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ವಿಶ್ವದಲ್ಲಿ 29.97 ಲಕ್ಷ ಮಂದಿ ವಿವಿಧ ಆಸ್ಪತ್ರೆ ಹಾಗೂ ತಾತ್ಕಾಲಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ (371,006 ಲಕ್ಷ) ಹಾಗೂ ಗುಣಮುಖರಾದವರನ್ನೂ(2,738,284) ಸೇರಿ ಒಟ್ಟು 3,109,290 ಪ್ರಕರಣಗಳನ್ನು ಮುಕ್ತಾಯಗೊಳಿಸಿದ ಪ್ರಕರಣಗಳೆಂದು ಪರಿಗಣಿಸಲಾಗಿದೆ.

More from the blog

ಗೋಳ್ತಮಜಲು : ಜೆಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅವಿರೋಧ ಆಯ್ಕೆ..

ಬಂಟ್ವಾಳ : ಗೋಳ್ತಮಜಲು ಜೆಮ್ ಆಂಗ್ಲ ಮಾಧ್ಯಮ ಶಾಲೆಯ 2025-26 ರ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಗೋಳ್ತಮಜಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫಾತಿಮಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಾ ಮ್ಯಾನೇಜಿಂಗ್...

ನೇರಳಕಟ್ಟೆ : ಸರಕಾರಿ ಶಾಲಾ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನೆ..

ಬಂಟ್ವಾಳ : ನೇರಳಕಟ್ಟೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್. ಅನುದಾನ ಹಾಗೂ ಎನ್.ಎಮ್.ಪಿ.ಎ. ಸಂಸ್ಥೆಯ ಸಿ.ಎಸ್.ಆರ್. ನಿಧಿಯಿಂದ ನಿರ್ಮಾಣವಾದ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನಾ...

ಬಿ. ಸಿ. ರೋಡ್ ನಲ್ಲಿ ತೆಂಗು ಬೆಳೆ ಮಾಹಿತಿ ಸಂವಾದ

ಬಂಟ್ವಾಳ: ತೆಂಗು ಬೆಳೆಯ ಸೂಕ್ಷ್ಮತೆಯನ್ನು ತಿಳಿದುಕೊಳ್ಳಿ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತೆಂಗು ಬೆಳೆಗಾರ ಕೊಂಡಾಣ ಚಂದ್ರಶೇಖರ ಗಟ್ಟಿ ಹೇಳಿದರು. ಅವರು ಜು. 15ರಂದು ಬಿ ಸಿ ರೋಡ್ ರಂಗೋಲಿ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ...

ಅರಣ್ಯ ಗಸ್ತುಪಾಲಕ ಜಿತೇಶ್.ಪಿ.ಗೆ ಮುಖ್ಯಮಂತ್ರಿ ಪದಕ

ಮಂಗಳೂರು:  ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಇವರು ಸುಮಾರು 20 ವರ್ಷಗಳಿಂದ ಪಂಜ, ಮಂಗಳೂರು, ಬಂಟ್ವಾಳ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಂಟ್ವಾಳ...