ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡಬಿದ್ರೆಯ 53 ವರ್ಷದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನದಲ್ಲಿ ಮೂವರು ಕೊರೊನಾಗೆ ಬಲಿಯಾಗಿ ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿತ್ತು. ಇಂದು ಮತ್ತೇ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 26 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.














