ಕೋವಿಡ್ -19 ವೈರಸ್ ಸೊಂಕಿಗೆ ತುತ್ತಾಗಿ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರಿಗೆ ಆತಂಕ ಮೂಡಿಸಿದೆ. ಬಂಟ್ವಾಳ ತಾಲೂಕಿನಲ್ಲಿ ಇಂದು ವೃದ್ದರೋರ್ವರು ಕೊರೊನಾ ಸೊಂಕಿಗೆ ಮೃತಪಟ್ಟಿದ್ದು, ಆ ಮೂಲಕ ತಾಲೂಕಿನಲ್ಲಿ ಒಟ್ಟು 6 ಮಂದಿ ಕೊರೊನಾಕ್ಕೆ ಬಲಿಯಾದಂತಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಭಯದ ನೆರಳಿನಲ್ಲಿ ಬದುಕು ಸಾಗಿಸುವಂತಾಗಿದೆ.


ಬಂಟ್ವಾಳ: ಕೋವಿಡ್ 19 ವೈರಸ್ ಬಂಟ್ವಾಳ ತಾಲೂಕಿನ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರಿಪಳ್ಳ ನಿವಾಸಿಯೋರ್ವರು ಇಂದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಮಾರಿಪಳ್ಳ ನಿವಾಸಿ( 85) ವರ್ಷ ವಯಸ್ಸಿನ ವೃದ್ಧ ರೋರ್ವರು ಇಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು ಕಳೆದ ಕೆಲ ದಿನಗಳ ಹಿಂದೆ ಅಸ್ತಮಾ ಶ್ವಾಸಕೋಶದ ಚಿಕಿತ್ಸೆ ಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾದ ವೇಳೆ ಇವರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು ವರದಿಯಲ್ಲಿ ಕೊರೊನಾ ಪಾಸಿಟಿವ್ ಲಕ್ಷಣಗಳು ಬಂದಿದೆ. ಬಳಿಕ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.












