Friday, July 11, 2025

ಮೂಡಬಿದ್ರೆ: ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೊರೊನ ಸೋಂಕು ದೃಢ

ಬಂಟ್ವಾಳ: ರಾಜ್ಯದಲ್ಲಿ ಕೊರೋನಾ ಗೆ ಮತ್ತೊಂದು ಬಲಿ. ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತನ ಸಾವು. ದ.ಕ. ಜಿಲ್ಲೆಯಲ್ಲಿ 6ನೇ ಸಾವು. ಕ್ವಾರಂಟೈನ್ ಸೆಂಟರ್ ನಲ್ಲಿ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯಲ್ಲಿ ಇದೀಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮೃತರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿತ್ತು. ಇದರ ವರದಿ ಇಂದು ಲಭ್ಯವಾಗಿದ್ದು, ಮೃತರ ಪರೀಕ್ಷಾ ವರದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.

ಮೂಡಬಿದ್ರೆಯ ಕಡಂದಲೆ ನಿವಾಸಿ ಮೃತ ಪಟ್ಟಿದ್ದಾರೆ. ಇವರು ಮುಂಬೈ ನಿಂದ ಬಂದು ಕ್ವಾರಂಟೈನ್ ನಲ್ಲಿದ್ದು, ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವ್ಯಕ್ತಿ ಜಿಲ್ಲಾಡಳಿತ ನಿಗದಿ ಪಡಿಸಿದ ಚೆಕ್ ಪೋಸ್ಟ್ ಮೂಲಕ ಬಾರದೆ, ಸಚ್ಚೇರಿಪೇಟೆ ಒಳ ರಸ್ತೆಯ ಮೂಲಕ ಮೂಡುಬಿದಿರೆ ಕಡಂದಲೆ ಗ್ರಾಮಕ್ಕೆ ಬಂದಿದ್ದರು. ಬಳಿಕ ಅವರನ್ನು ದ.ಕ. ಹಿರಿಯ ಪ್ರಾ. ಶಾಲೆ ಕಡಂದಲೆ ಮೈನ್ ನಲ್ಲಿ ಕ್ವಾರಂಟೈನ್ ಗೊಳಪಡಿಸಲಾಗಿತ್ತು. ಆದರೆ, ಕೊರೊನಾ ಭೀತಿ ಹಾಗೂ ವೈಯುಕ್ತಿಕ ಕಾರಣದಿಂದ ಅವರು ಗುರುವಾರದಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಗಂಟಲ ದ್ರವ ಮಾದರಿ ಪರೀಕ್ಷೆಗೆ ರವಾನಿಸಲಾಗಿದ್ದು, ಇದೀಗ ವರದಿ ಲಭ್ಯವಾಗಿದ್ದು, ಪಾಸಿಟಿವ್ ಬಂದಿದೆ. ರಾಜ್ಯದಲ್ಲಿ 42ಕ್ಕೆ ಏರಿದ ಸಾವಿನ ಸಂಖ್ಯೆ.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...