Friday, June 27, 2025

ಕೋವಿಡ್-19 ಎಫೆಕ್ಟ್ : ರಾಜ್ಯದ ದೇವಾಲಯಗಳಿಂದ 600 ಕೋಟಿ ನಷ್ಟ- ಸಚಿವ ಕೋಟ

ಮಂಗಳೂರು : ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಆದ ಪರಿಣಾಮ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಅಂದಾಜು 600 ಕೋಟಿ ನಷ್ಟವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲ್ಲೂರು ದೇವಾಲಯವೊಂದರಲ್ಲಿ ಎಪ್ರಿಲ್-ಮೇ ತಿಂಗಳಲ್ಲಿ14 ಕೋಟಿ ನಷ್ಟವಾಗಿದೆ. ಎಲ್ಲಾ ದೇವಸ್ಥಾನ ಮುಚ್ಚಿದ ಪರಿಣಾಮ ಈ ನಷ್ಟವಾಗಿದ್ದು, ಎ ದರ್ಜೆ ಮತ್ತು ಬಿ ದರ್ಜೆ ದೇವಸ್ಥಾನಗಳಲ್ಲಿ ವಾರ್ಷಿಕ ಶೇಕಡ 35 ರಷ್ಟು ಆದಾಯ ಕಡಿಮೆಯಾಗಿದೆ ಎಂದು ತಿಳಿಸಿದರು.
ಲಾಕ್ ಡೌನ್ ಪರಿಣಾಮ ಧಾರ್ಮಿಕ ಸ್ಥಳಗಳು ಮುಚ್ಚಿದರಿಂದ ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟವಾಗಿದೆ. ಲಕ್ಷಾಂತರ ಭಕ್ತರು ಮಕ್ಕಳ ಪರೀಕ್ಷೆ ಮುಗಿದು ಬೇಸಿಗೆ ರಜೆಯ ಸಂದರ್ಭದಲ್ಲಿ ವಿವಿಧ ದೇವಸ್ಥಾನಗಳಿಗೆ ತೆರಳುವುದು ಸಾಮಾನ್ಯ. ಇದೇ ಕಾರಣಕ್ಕೆ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳು ದೇವಸ್ಥಾನಗಳಿಗೆ ಅತೀ ಹೆಚ್ಚು ಆದಾಯ ತಂದುಕೊಡುತ್ತಿದ್ದ ಸಮಯವಾಗಿತ್ತು. ಆದರೆ ಈ ಬಾರಿ ಮತ್ತು ಇದೇ ಮೊದಲ ಬಾರಿ ಇಷ್ಟು ದೀರ್ಘಕಾಲದ ವರೆಗೆ ರಾಜ್ಯದ ಎಲ್ಲಾ ದೇವಸ್ಥಾಗಳಿಗೂ ಬೀಗ ಬಿದ್ದ ಪರಿಣಾಮ‌ ಸರ್ಕಾರದ ಬೊಕ್ಕಸಕ್ಕೆ ಅಂದಾಜು 600 ಕೋಟಿ ನಷ್ಟವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...