Wednesday, January 28, 2026

ದ.ಕ. ಜಿಲ್ಲೆಯಲ್ಲಿ ಕೋವಿಡ್ ಗೆ ಉಚಿತ ಚಿಕಿತ್ಸೆ: ಸೌಲಭ್ಯ ಪಡೆಯುವ ವಿಧಾನ ಹೇಗೆ…?

ಮಂಗಳೂರು: ಕೊರೋನಾ ಸೋಂಕಿತರಿಗೆ ದ.ಕ. ಜಿಲ್ಲೆಯ 7 ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಹಾಗೂ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲೂ ಆಯುಷ್ಮಾನ್‌ ಯೋಜನೆಯಡಿ ಉಚಿತ ಚಿಕಿತ್ಸೆ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕೋವಿಡ್ ಪಾಸಿಟಿವ್‌ ಹೊಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದೇ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ಸೂಚನೆ ನೀಡಲಾಗಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಇತರರಿಗೆ ತೊಂದರೆಯಾಗದಂತೆ ಇರಬೇಕಾಗಿದ್ದು, ಮನೆಯಲ್ಲಿ ಪ್ರತ್ಯೇಕ ಕೊಠಡಿ, ಅದರೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ ಹೋಂ ಐಸೊಲೇಶನ್‌ಗೆ ಅವಕಾಶವಿದೆ. ಮನೆಯಲ್ಲಿ ಪ್ರತ್ಯೇಕ ಕೊಠಡಿ ಹಾಗೂ ಶೌಚಾಲಯದ ವ್ಯವಸ್ಥೆ ಇಲ್ಲದೇ ಇದ್ದಲ್ಲಿ ಅಂಥ‌ವರಿಗೆ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಈಗ ಕೊಣಾಜೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದ್ದು, ಇನ್ನಷ್ಟು ಸೆಂಟರ್‌ಗಳನ್ನು ತೆರೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೌಲಭ್ಯ ಪಡೆಯುವುದು ವಿಧಾನ:
ಕೋವಿಡ್ 19 ಸೋಂಕಿನ ಲಕ್ಷಣಗಳಿದ್ದು, ಚಿಕಿತ್ಸೆ ಬೇಕಾಗಿದ್ದಲ್ಲಿ ಅಂಥವರಿಗೆ ವೆನ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಅಲ್ಲಿ ಸ್ಥಳವಕಾಶ ಇಲ್ಲದಿದ್ದಲ್ಲಿ ಮಾತ್ರ ಸರಕಾರ ನಿಗದಿಪಡಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.
ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳುವವರು ಕಡ್ಡಾಯವಾಗಿ ಆಯಾ ಆಸ್ಪತ್ರೆಗಳಿಗೆ ಗೊತ್ತುಪಡಿಸಿರುವ ಕೋವಿಡ್‌ ಸಂಬಂಧಿತ ಅಧಿಕಾರಿಗಳಿಗೆ ಮೊಬೈಲ್‌ ಮೂಲಕ ಮಾಹಿತಿ ನೀಡಬೇಕು. ಸರಕಾರ ಗೊತ್ತುಪಡಿಸಿರುವ ಆಸ್ಪತ್ರೆಗಳಲ್ಲಿ ಈ ಮೂಲಕ ಉಚಿತ ಚಿಕಿತ್ಸೆ ಪಡೆಯಬಹುದು. ಈ ಆಸ್ಪತ್ರೆಗಳಲ್ಲಿ 100 ಬೆಡ್‌ಗಳನ್ನು ಖಾಲಿ ಇರಿಸಲು ಜಿಲ್ಲಾಡಳಿತದ ಅಧಿಕಾರಿಗಳು ಆಸ್ಪತ್ರೆಗಳ ಪ್ರಮುಖರೊಂದಿಗೆ ಚರ್ಚಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ವೆನ್ಲಾಕ್‌ನಲ್ಲಿ ಕೋವಿಡ್ 19 ಉಚಿತ ಪರೀಕ್ಷೆಗೆ ಅವಕಾಶವಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕವಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

More from the blog

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...