ಬಂಟ್ವಾಳ: ಕೋವಿಡ್ ಪಾಸಿಟಿವ್ ಸೊಂಕಿಗೆ ಕೈಕಂಬ ಪರ್ಲಿಯಾ ನಿವಾಸಿ (70) ವರ್ಷದ ವೃದ್ಧ ರೋರ್ವರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇಂದು ಮಧ್ಯಾಹ್ನ ವೇಳೆ ಧಪನ ಕಾರ್ಯ ನಡೆದಿದೆ. ಬಿಸಿರೋಡಿನ ಕೈಕಂಬ ಪರ್ಲಿಯಾ ನಿವಾಸಿ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು, ಕೆಲ ದಿನಗಳ ಹಿಂದೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.



ಆ ಸಂದರ್ಭದಲ್ಲಿ ಇವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಕೋವಿಡ್ ಪಾಸಿಟಿವ್ ಸೊಂಕು ದೃಢಪಟ್ಟಿತ್ತು. ಬಳಿಕ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಇವರು ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಅವರ ಪಾರ್ಥಿವ ಶರೀರವನ್ನು ಇಂದು ಬಿಸಿರೋಡಿನ ಕೈಕಂಬ ಮಸೀದಿಯ ಧಪನ ಭೂಮಿಯಲ್ಲಿ ಶಾಸ್ತ್ರೋಕ್ತವಾಗಿ ಧಪನ ಮಾಡಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸರು ಹಾಜರಿದ್ದರು.












