Tuesday, January 27, 2026

ಕೊರೊನಾ ಮಾರ್ಗಸೂಚಿ ಪಾಲಿಸದವರ ವಿರುದ್ದ ಕಠಿಣ ಕ್ರಮ : ಸಚಿವ ಕೆ. ಸುಧಾಕರ್‌

ಬೆಂಗಳೂರು : ಕೊರೊನಾ ಮಾರ್ಗಸೂಚಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ತಜ್ಞರು ಮತ್ತು ಅಧಿಕಾರಿಗಳ ಸಭೆ ಬಳಿಕ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮಾಸ್ಕ್‌ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ, ಸಭೆ ಸಮಾರಂಭದ ಹೆಸರಲ್ಲಿ ಹೆಚ್ಚು ಜನ ಸೇರಲು ಅವಕಾಶ ಮಾಡಿಕೊಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಒಂದೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದ ಎಂದು ತಿಳಿಸಿದರು.
ಲಾಕ್‌ಡೌನ್‌ ತೆರವಿನ ಬಳಿಕ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಪ್ರಮಾಣ ಏರಿಕೆಯಾಗುತ್ತಿದೆ. ಎಷ್ಟು ಜಾಗೃತಿ ಕ್ರಮಗಳನ್ನು ಜನರಿಗೆ ತಿಳಿಸಿದರೂ ಕೂಡಾ ಹೆಚ್ಚಿನವರು ಮಾರ್ಗಸೂಚಿಗಳ ಉಲ್ಲಂಘನೆ ಮಾಡುತ್ತಲ್ಲೇ ಇದ್ದಾರೆ. ಇನ್ನು ಉಳಿದಿರುವ ಒಂದೇ ಮಾರ್ಗ, ಈ ಸಂದರ್ಭದಲ್ಲಿ ದಂಡ ಪ್ರಯೋಗ ಅನಿವಾರ್ಯವಾಗಿದೆ. ಹಾಗಾಗಿ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೊರೊನಾ ವಿರುದ್ಧ ಇಡೀ ಜಗತ್ತು ಹೋರಾಡುತ್ತಿದೆ. ಮಾಸ್ಕ್‌ ಧರಿಸುವುದು ಅತೀ ಮುಖ್ಯ. ಜನರು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳದಿದ್ದರೆ, ಯಾವುದೇ ಸರ್ಕಾರವಾದರೂ ಕೊರೊನಾದಂತಹ ಈ ಭೀಕರ ವೈರಸ್ ವಿರುದ್ಧ ಹೋರಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...