Thursday, June 26, 2025

ಕಟ್ಟಡ ಕಾರ್ಮಿಕರ ಖಾತೆಗೆ ಕೊವಿಡ್-19 ಪರಿಹಾರದ ಹಣ ಜಮಾ ಮಾಡಲಾಗಿದೆ: ರಾಜ್ಯ ಸರ್ಕಾರ ಹೈ ಕೋರ್ಟ್ ಗೆ ನೋಟೀಸ್

ಬೆಂಗಳೂರು : ಲಾಕ್‌ಡೌನ್‌ ನಿಂದಾಗಿ ಸಂಕಷ್ಟದಲ್ಲಿದ್ದ ಕಟ್ಟಡ ಕಾರ್ಮಿಕರ ಖಾತೆಗೆ ಕೊವಿಡ್-19 ಪರಿಹಾರದ ಹಣದಲ್ಲಿ ಒಟ್ಟು 619 ಕೋಟಿ ರೂ. ಜಮಾ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಕೊವಿಡ್-19 ಪರಿಹಾರದ ಹಣದ ಬಗ್ಗೆ ಮಾಹಿತಿ ನೀಡುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ವಕೀಲರು, 12.39 ಲಕ್ಷ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ತಲಾ 5 ಸಾವಿರ ರೂ. ನಗದನ್ನು ಒಟ್ಟು 619 ಕೋಟಿ ರೂ. ಜಮಾ ಮಾಡಲಾಗಿದೆ. ಹಾಗೆಯೇ ಇದರ ನಿರ್ವಹಣೆಗಾಗಿ ರಾಜ್ಯದಾದ್ಯಂತ 41 ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿಲಾಗಿದೆ ಎಂದು ಮಾಹಿತಿ ನೀಡಿದರು.
ನ್ಯಾಯಪೀಠವು ಈ ಬಗ್ಗೆ ಹೇಳಿಕೆ ಕೇಳಿ ಸರ್ಕಾರ ಹೇಳುವಂತೆ ಈವರೆಗೆ 12.39 ಲಕ್ಷ ಕಾರ್ಮಿಕರಿಗಷ್ಟೇ ಪರಿಹಾರ ತಲುಪಿದ್ದು, ಇನ್ನುಳಿದ ಕಾರ್ಮಿಕರಿಗೆ ಯಾವಾಗ ಪರಿಹಾರ ನೀಡಲಾಗುತ್ತದೆ ಮತ್ತು ಕಟ್ಟಡ ಕಾರ್ಮಿಕರನ್ನು ನೋಂದಾಯಿಸಿಕೊಳ್ಳಲು ಅನುಸರಿಸುತ್ತಿರುವ ಮಾನದಂಡಗಳು ಯಾವುದು ಎಂದು ವಿವರಣೆ ನೀಡಲು ಸೂಚನೆ ನೀಡಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...