Monday, February 2, 2026

*ಗ್ರಾಮೀಣ ವರದಿಗಾರರಿಗೆ ಆರ್ಥಿಕ ಪರಿಹಾರ ಒದಗಿಸಿ: ತುಂಗಪ್ಪ ಬಂಗೇರ*

ಬಂಟ್ವಾಳ: ಕೋವಿಡ್-19 ಎರಡನೇ ಅಲೆಯ ಲಾಕ್‌ಡೌನ್ ಕಾರಣದಿಂದ ಸಂಕಷ್ಟಕ್ಕೀಡಾದ ಗ್ರಾಮೀಣ ವರದಿಗಾರರಿಗೆ ಮತ್ತು ಪತ್ರಕರ್ತರಿಗೂ ಆರ್ಥಿಕ ಪರಿಹಾರ ಒದಗಿಸಬೇಕಾಗಿ ದ.ಕ. ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ವಿನಂತಿಸಿದ್ದಾರೆ.

 

ಕೊರೊನಾ ಮಾಹಾಮಾರಿಯ ವಿರುದ್ಧದ ಹೋರಾಟದಲ್ಲಿ ಗ್ರಾಮೀಣ ವರದಿಗಾರರ ಪಾಲೂ ಇದೆ.ಅವರು ಕೊರೊನಾ ಸೋಂಕಿಗೆ ಒಳಗಾಗುವ ಭೀತಿ ಇದ್ದರೂ ಹಳ್ಳಿ ಪ್ರದೇಶದಲ್ಲಿ ವರದಿಗಾರಿಕೆ ನಡೆಸುತ್ತಿದ್ದಾರೆ.ಅರೆಕಾಲಿಕ ಉದ್ಯೋಗಿಗಳಾಗಿರುವ ಗ್ರಾಮೀಣ ವರದಿಗಾರರು ಆರ್ಥಿಕವಾಗಿ ದುರ್ಬಲರಾಗಿದ್ದು, ಅವರಿಗೂ ಇತರ ಸಮುದಾಯಗಳಿಗೆ ಆರ್ಥಿಕ ಪರಿಹಾರ ಘೋಷಿಸಿರುವಂತೆ ಪರಿಹಾರ ಒದಗಿಸಬೇಕು. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿಯೂ ಮನವಿ ಮಾಡಿರುವುದಾಗಿ ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...