Sunday, July 13, 2025

ರಾಜ್ಯದಲ್ಲಿ ಕೊರೊನಾಗೆ ಮತ್ತೋರ್ವ ಪೊಲೀಸ್‌ ಸಿಬ್ಬಂದಿ ಬಲಿ

ಬೆಂಗಳೂರು : ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೋರ್ವ ಪೊಲೀಸ್‌ ಸಿಬ್ಬಂದಿ ಬಲಿಯಾದ ಬಗ್ಗೆ ವರದಿಯಾಗಿದೆ.
ಕಲಾಸಿಪಾಳ್ಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ 54 ವರ್ಷದ ಹೆಡ್ ಕಾನ್‌ಸ್ಟೆಬಲ್ ಶನಿವಾರ(ಇಂದು) ಬೆಳಿಗ್ಗೆ ಸಾವನ್ನಪ್ಪಿದ್ದಾರೆ.

ಎರಡು ದಿನಗಳ ಹಿಂದೆ ಕಲಾಸಿಪಾಳ್ಯ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಸೇರಿದಂತೆ ಎಂಟು ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿದ್ದ ಪೈಕಿ ಹೆಡ್ ಕಾನ್‌ಸ್ಟೆಬಲ್ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಶನಿವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಬೆಂಗಳೂರು ವಿಲ್ಸನ್ ಗಾರ್ಡನ್ ಠಾಣೆಯ 59 ವರ್ಷದ ಎಎಸ್ಐಯೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸ್ಯಾನಿಟೈಸಿಂಗ್ ಮಾಡಲಾಗಿದೆ ಎಂಬ ಮಾಹಿತಿ ಇದೆ.

More from the blog

‘ಭೂಮಿಯಲ್ಲಿ ಜೀವನ’ ಗದ್ದೆಯಲ್ಲಿ ನೇಜಿ‌ ನೆಡುವ ವಿಶೇಷ ಕಾರ್ಯಕ್ರಮ..

ಬಂಟ್ವಾಳ :  ಸಹ್ಯಾದ್ರಿ ಕಾಲೇಜು ಮಂಗಳೂರು ಇಲ್ಲಿನ ಎಂ.ಬಿ.ಎ.ವಿದ್ಯಾರ್ಥಿಗಳ ಕಾರ್ಪೋರೆಟ್ ಸಾಮಾಜಿಕ ಜವಬ್ದಾರಿ ಕ್ಲಬ್ ಆಯೋಜಿಸಿದ "ಭೂಮಿಯಲ್ಲಿ ಜೀವನ" ಗದ್ದೆಯಲ್ಲಿ ನೇಜಿ‌ ನೆಡುವ ವಿಶೇಷ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನಾವೂರದ ಸಾಮಾಜಿಕ ನೇತಾರ...

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...