Saturday, January 31, 2026

*ದ.ಕ.: ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ಬ್ರೇಕ್ – ನಿಷೇಧಾಜ್ಞೆ ಜಾರಿಗೊಳಿಸಿ ಡಿ.ಸಿ ಆದೇಶ*

ಬಂಟ್ವಾಳ ಮಾ 30: ಕೊರೊನಾ ವೈರಸ್‌ ಸೋಂಕು 2ನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ , ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಮಾರ್ಚ್‌ 29ರಿಂದಲೇ 144 ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಷಬ್-ಎ- ಬರತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದಾರೆ.

ಇದಲ್ಲದೆ ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಮೇಳ, ಜಾತ್ರೆ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್‌ 29ರಿಂದ  ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಿರುವುದು ಈ ಸೂಚನೆಯನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ. ತಪ್ಪಿದ್ದಲ್ಲಿ ಸಂಬಂಧಿತ ಅಧಿಕಾರಿಗಳಿಂದ ಸರ್ಕಾರದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳುವುದು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...