Saturday, June 28, 2025

ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆ ಕೊರೊನಾ ಪರೀಕ್ಷೆ ಅಗತ್ಯ : ಕೇಂದ್ರದಿಂದ ವಿವಿಧ ರಾಜ್ಯಗಳಿಗೆ ಸೂಚನೆ

ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆಗೆ ತೆರಳಿ ಕೊರೊನಾ ಪರೀಕ್ಷೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ಪ್ರೀತಿ ಸೂದನ್ ಅವರು ಈ 38 ಮಹಾನಗರಗಳ ಪಾಲಿಕೆಗಳ ಆಯುಕ್ತರು, ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ವೇಳೆ ಈ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರವು ಸೋಂಕು ನಿಯಂತ್ರಿಸಲು ಹಾಗೂ ಸೋಂಕಿನಿಂದ ಸಾವನ್ನಪ್ಪುವ ಪ್ರಮಾಣವನ್ನು ಕಡಿಮೆ ಮಾಡಲು ಕರ್ನಾಟಕ ಸೇರಿ 10 ರಾಜ್ಯಗಳ 38 ಜಿಲ್ಲೆಗಳ 378 ಮಹಾನಗರಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸಬೇಕು ಎಂದು ತಿಳಿಸಿದೆ.

ಲಾಕ್‌ಡೌನ್‌ ತೆರವಾದ ಕಾರಣದಿಂದಾಗಿ ಇನ್ನು ಮುಂದೆ ಜಿಲ್ಲಾವಾರು ಯೋಜನೆ ರೂಪಿಸಿ ಮನೆಮನೆಗೆ ತೆರಳಿ ಆರೋಗ್ಯ ತಪಾಸಣೆ, ಉತ್ತಮ ಪರೀಕ್ಷೆ, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಎಲ್ಲಾ ಹಂತದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಅಧಿಕ ಪ್ರಮಾಣದಲ್ಲಿ ಪರೀಕ್ಷೆ ನಡೆಸಿ ಸೋಂಕಿತರು ಪತ್ತೆಯಾದಾಗಲೇ ಯಾವುದೇ ವಿಳಂಬ ಮಾಡದೇ ಅವರನ್ನು ಕೂಡಲೇ ಅಲ್ಲಿಂದ ಆಸ್ಪತ್ರೆಗೆ ದಾಖಲಿಸಬೇಕು. ಇದರಿಂದಾಗಿ ಸೋಂಕು ಹರಡುವುದನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ.
ಕರ್ನಾಟಕದಲ್ಲಿ ಯಾವ ಯಾವ ನಗರಗಳು ಈ ಯೋಜನೆ ಇದೆ ಎಂಬುದು ಇನ್ನಷ್ಟೇ ಸಿಗಬೇಕಿದೆ.

More from the blog

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...