ಪುತ್ತೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹವೊಂದು ಗುರುವಾರ ಮುಂಜಾನೆ ತಾಲೂಕಿನ ಸವಣೂರು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.


ಪುತ್ತೂರು – ಕಾಣಿಯೂರು ರೈಲು ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆಯಾಗಿಲ್ಲ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.












