ಬಂಟ್ವಾಳ: ಫರಂಗಿಪೇಟೆ ಗ್ರಾ.ಪಂ. ಸದಸ್ಯ ನ ಮೇಲೆ ತಲವಾರು ದಾಳಿ ನಡೆಸಿದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮುಂಜಾನೆ ಮಲ್ಪೆ ಯಲ್ಲಿ ನಡೆದಿದೆ.


ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿನ ಮೀನು ವ್ಯಾಪಾರಿಯೊಬ್ಬರ ಮೇಲೆ ಮಲ್ಪೆ ಮೀನುಗಾರಿಕಾ ಬಂದರ್ ನಲ್ಲಿ ತಲವಾರು ದಾಳಿ ನಡೆದ ಘಟನೆ ಇಂದು ಮುಂಜಾನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಫರಂಗಿಪೇಟೆ ನಿವಾಸಿ ರಿಯಾಜ್ ಎಂಬವರು ತಲವಾರಿನ ಏಟಿಗೆ ಗಾಯಗೊಂಡವರು.
ಫರಂಗಿಪೇಟೆಯ ಹಂಝಾ ಎಂಬವರ ಮಗ ಮೀನು ವ್ಯಾಪಾರಿ ಹಾಗೂ ಫರಂಗಿಪೇಟೆ ಗ್ರಾಮ ಪಂಚಾಯತ್ ಸದಸ್ಯರಾಗಿರುವ ರಿಯಾಝ್ ಫರಂಗಿಪೇಟೆ (36) ಎಂಬವರ ಮೇಲೆ ಆಪರಿಚಿತ ನಾಲ್ವರು ತಲವಾರು ದಾಳಿ ನಡೆದಿದೆ.
ರಿಯಾಜ್ ಅವರು ಎಂದಿನಂತೆ ಮೀನು ಖರೀದಿಸಿ ಮಾರಾಟ ಮಾಡಲು ಇಂದು ಮುಂಜಾನೆ 4:30 ರ ಸಮಯದಲ್ಲಿ ಇತರ ಮೂವರೊಂದಿಗೆ ಎಂದಿನಂತೆ ತನ್ನ ಪಿಕಪ್ ವಾಹನದಲ್ಲಿ ಮಲ್ಪೆ ಮೀನುಗಾರಿಕಾ ಬಂದರಿಗೆ ಮಲ್ಪೆ ಪಿಶ್ಚಿಂಗ್ ಪೋರ್ಟ್ ಆಗಮಿಸಿದ್ದರು.
ಬಂದರಿನೊಳಗೆ ತಮ್ಮ ವಾಹನ ನಿಲ್ಲಿಸಿ, ಇತರ ಮೂವರು ಚಾಹ ಕುಡಿಯಲು ಇಳಿದು ಹೋಗಿದ್ದರು. ಆದರೆ ರಿಯಾಝ್ ರವರು ಅದೇ ಪಿಕಪ್ ವಾಹನದಲ್ಲಿ ನಿದ್ರೆಗೆ ಜಾರಿದ್ದರು. ಇದೇ ಸಮಯದಲ್ಲಿ ಅವರ ವಾಹನವನ್ನು ಹಿಂಬಾಲಿಕೊಂಡು ಬಿಳಿ ಬಣ್ಣದ (KA 05 9184) ಕಾರಿನಲ್ಲಿ ಬಂದಿದ್ದ ನಾಲ್ವರು ರಿಯಾಝ್ ಮೇಲೆ ತಲವಾರು ದಾಳಿ ನಡೆಸಿದ್ದಾರೆ.
ದಾಳಿಗೊಳಗಾದ ರಿಯಾಜ್ ರವರ ಕೈ ತೂಳು, ಕಾಲಿನ ಬೆರಳು, ತಲೆಯ ಹಿಂಬಾಗಕ್ಕೆ ಗಾಯವಾಗಿರುವುದಲ್ಲದೆ, ಕಿರು ಬೆರಳು ತುಂಡಾಗಿ ಬಿದ್ದಿದೆ. ತುಂಡಾದ ಬೆರಳನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಮರು ಜೋಡಣೆಯ ಕಾರ್ಯ ನಡೆಯುತ್ತಿದೆ.
ಸಧ್ಯ ಪ್ರಾಣಾಪಾಯದಿಂದ ಪಾರಾಗಿರುವ ರಿಯಾಝ್ ರವರು ಮಣಿಪಾಲದ ಕೆ.ಎಂ.ಸಿ ಕೆ.ಎಂ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಯ ರಭಸಕ್ಕೆ ವಾಹನದ ಒಳಗೆಲ್ಲಾ ರಕ್ತ ಚಿಮ್ಮಿದೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.