Saturday, January 31, 2026

Crop Insurance : ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಿಮಿಯಂ ಪ್ರಾರಂಭ..

ಬಂಟ್ವಾಳ : ಕರಾವಳಿಯ ದಕ್ಸಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷೆ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂದಿಸಿದಂತೆ ತೋಟಗಾರಿಕೆ ಇಲಾಖೆ ಜಾರಿಗೊಳಿಸಿದ್ದು , ಅಡಿಕೆ ,ಕರಿಮೆಣಸು , ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆವಿಮೆ ಮಾಡಲು ಪ್ರಿಮಿಯಂ ಪಾವತಿಸಲು ಪ್ರಾರಂಭವಾಗಿದ್ದು , ಬೆಳೆಸಾಲ ಪಡೆದಿರುವ ರೈತರು ತಾವು ಬೆಳೆ ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕ ಮಾಡಿ ನೋಂದಾವಣೆ ಮಾಡಿಸಿ ಪ್ರಿಮಿಯಂ ಮೊತ್ತ ಪಾವತಿಸಬಹುದಾಗಿದೆ .ಬೆಳೆ ಸಾಲ ಹೊಂದಿಲ್ಲದ ರೈತರು ಸಹ ಈ ಯೋಜನೆಯಡಿಯಲ್ಲಿ ಪ್ರಿಮಿಯಂ ಮೊತ್ತ ಪಾವತಿಸಿ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ .

ರೈತರು ತಾವು ಬೆಳೆದ ಬೆಳೆಗಳನ್ನು ಬೆಳೆ ಸಮೀಕ್ಷೆ ಮಾಡಿಸಬೇಕು ಹಾಗೂ ಫಾರ್ಮರ್ ಐಡಿ ಹೊಂದಿರಬೇಕು ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಎಕರೆ ಒಂದಕ್ಕೆ ರೂ 2590/- ಮತ್ತು ಕರಿಮೆಣಸು ಎಕರೆ ಒಂದಕ್ಕೆ ರೂ 951/- ವಿಮೆ ಕಂತು ಪಾವತಿಸಬೇಕಾಗುತ್ತದೆ .

ಈ ಯೋಜನೆಯ ನೋಂದಾವಣಿಗೆ ಜುಲೈ 31 ಕೊನೆಯ ದಿನಾಂಕವಾಗಿದ್ದು , ಬೆಳೆಸಾಲ ಪಡೆದಿರುವ ಎಲ್ಲಾ ರೈತ ಬಾಂದವರು ಜಮೀನಿನ ಆರ್.ಟಿ.ಸಿ ಯೊಂದಿಗೆ ಆಧಾರ್ ಕಾರ್ಡ್ , ಬ್ಯಾಂಕ್ ಪುಸ್ತಕ ಹಾಗೂ ನಾಮಿನಿಯ ಆಧಾರ್ ನೊಂದಿಗೆ ನಿಗದಿತ ಅವಧಿಯೊಳಗೆ ತಮ್ಮ ಕಾರ್ಯ ವ್ಯಾಪ್ತಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಛೇರಿಗಳನ್ನು ಸಂಪರ್ಕಿಸಿ ಬೆಳೆವಿಮೆ ಯೋಜನೆ ಪ್ರಯೋಜನ ಪಡೆಯಬೇಕೆಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಮೂಲಕ ರೈತರಿಗೆ ವಿನಂತಿ ಮಾಡಿದ್ದಾರೆ.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...