Tuesday, July 15, 2025

ನಿವೃತ್ತ ಸಿ.ಆರ್.ಪಿ.ಎಫ್ ಯೋಧನಿಗೆ ನ.1ರಂದು ಅದ್ದೂರಿ ಸ್ವಾಗತ

ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳುತ್ತಿರುವ ವಿಟ್ಲದ ನೆತ್ರಕೆರೆ ನಿವಾಸಿ ಸಿ ಆರ್ ಪಿ ಎಫ್ ಯೋಧ ದಯಾನಂದ ಅವರಿಗೆ ವಿಟ್ಲ ಸಿಟಿ ಲಯನ್ಸ್ ಕ್ಲಬ್ ಮತ್ತು ಸೈಂಟ್ ರೀಟಾ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಅದ್ದೂರಿ ಸ್ವಾಗತ ಕಾರ್ಯಕ್ರಮ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ  ಸೋಮವಾರ ಬೆಳಿಗ್ಗೆ 9.30ಕ್ಕೆ ನಡೆಯಲಿದೆ. ನಂತರ ಸೈಂಟ್ ರೀಟಾ ಶಾಲೆಯಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸ್ವೀಕರಿಸಲಿದ್ದಾರೆ.

2001ರಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ಮೇಜರ್ ದಯಾನಂದ ಅವರು ಒಟ್ಟು 20 ವರ್ಷಗಳ ಕಾಲ ದೇಶ ಸೇವೆಗೈದಿದ್ದಾರೆ. ಇದರ ನಡುವೆ 10 ವರ್ಷ ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದು, ಬಳಿಕ ಅಸ್ಸಾಂ ಮತ್ತು ನಾಗಲ್ಯಾಂಡ್ ಗಡಿಗಳಲ್ಲಿ ದೇಶ ಸೇವೆ ಸಲ್ಲಿಸಿದ್ದಾರೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಭಾರತೀಯ ಅರೆಸೇನಾ ಪಡೆಯಲ್ಲಿ ಕರ್ತವ್ಯ ಸಲ್ಲಿಸಿದ್ದರು.
ಇದೀಗ ನಿವೃತ್ತ ಹೊಂದಿದ್ದ ಇವರು ತಾಯ್ನಾಡಿಗೆ ಮರಳುತ್ತಿದ್ದು, ಅದ್ದೂರಿ ಸ್ವಾಗತ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ, ಯಶಸ್ವಿಗೊಳಿಸಬೇಕಾಗಿ ವಿನಂತಿ

More from the blog

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ನಿಧನ..

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ...

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...