ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ; ದ. ಕ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಅಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯಾದ್ಯಂತ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದು ತಿಳಿಸಿದರು.
ಬಳಿಕ ಪರಿಸ್ಥಿತಿ ಅವಲೋಕಿಸಿ ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳ ಬಗ್ಗೆ ಈ ತಿಂಗಳಾಂತ್ಯಕ್ಕೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
