Thursday, January 29, 2026

ಬಿ.ಸಿ.ರೋಡಿನಲ್ಲಿ ರಿಕ್ರಿಯೇಷನ್ ಕ್ಲಬ್ ಗೆ ಪೊಲೀಸ ರಿಂದ ದಾಳಿ : 39 ಮಂದಿಯ ಮೇಲೆ ಕೇಸ್ ದಾಖಲು ಗುಂಪು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ

ಬಂಟ್ವಾಳ: ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾರ್ಯಾಚರಿಸುತ್ತಿದ್ದ ರಿಕ್ರಿಯೇಶನ್ ಕ್ಲಬ್ ಗೆ ಬಂಟ್ವಾಳ ಪೊಲೀಸರು ದಾಳಿ ನಡೆಸಿದ್ದು, ಒಟ್ಟು ೩೯ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಂಟ್ವಾಳ ನಗರ ಠಾಣಾ ಇನ್ಸ್‌ಪೆಕ್ಟರ್ ಚೆಲುವರಾಜು ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಲ್ಲಿ ಕೋವಿಡ್ ನಿಯಮವನ್ನು ಪಾಲಿಸದೆ ಗುಂಪು ಸೇರಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಪಾಡದೆ ಸ್ಕಿಲ್ ಗೇಮ್ ಆಡುತ್ತಿದ್ದರು.

ಕ್ಲಬ್ ಗೆ ದಾಳಿ ನಡೆದಿರುವ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದು, ಬಳಿಕ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...