Thursday, June 26, 2025

ಅಕ್ರಮ ಮದ್ಯ ಸಂಗ್ರಹ: ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ದಾಳಿ

ಬಂಟ್ವಾಳ: ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದಾಳಿ ನಡೆಸಿ ಸುಮಾರು 33,510 ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡ ಘಟನೆ ಮೇರಮಜಲು ಗ್ರಾಮದ ತೇವುಕಾಡುನಲ್ಲಿ ನಡೆದಿದೆ.

ಬಂಟ್ವಾಳ ಗ್ರಾಮಾಂತರ ಠಾಣಾ ಸಬ್‌ಇನ್ಸ್ಪೆಕ್ಟರ್ ಪ್ರಸನ್ನ ಹಾಗೂ ಸಿಬಂದಿ ದಾಳಿ ನಡೆಸಿದ್ದು, ದಾಳಿಯ ವೇಳೆ ಮನೆಯಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಮನೆಯಂಗಳದಲ್ಲಿ ಆರೋಪಿ ನವೀನ್ ಡಿಸೋಜನನ್ನು ವಿಚಾರಿಸಿದಾಗ ಅಕ್ರಮ ಮದ್ಯ ಮಾರಾಟದ ಕುರಿತು ಒಪ್ಪಿಕೊಂಡಿದ್ದಾನೆ.

ಮನೆಯ ಸಮೀಪದ ಕೋಳಿ ಶೆಡ್‌ನಲ್ಲಿ 26,670 ರೂ. ಮೌಲ್ಯದ ೮ ರಟ್ಟಿನ ಬಾಕ್ಸಿನಲ್ಲಿ  90 ಎಂಎಲ್ ಮದ್ಯ ತುಂಬಿದ 762 ಸ್ಯಾಚೆಟ್‌ಗಳು, 6,840 ರೂ.ಮೌಲ್ಯದ 3 ರಟ್ಟಿನ ಬಾಕ್ಸಿನಲ್ಲಿ 500 ಎಂಎಲ್ ಮದ್ಯ ತುಂಬಿದ ಒಟ್ಟು 72 ಟಿನ್‌ಗಳು ಪತ್ತೆಯಾಗಿವೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...